ಭಾರಿ ಮಳೆಯಿಂದಾಗಿ ಮುಳುಗಡೆಯಾಗಿದ್ದ ಸೇತುವೆ ಮೇಲೆ ಸರ್ಕಾರಿ ಬಸ್ ಚಾಲಕನೊಬ್ಬ ಬಸ್ ಚಲಾಯಿಸಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಸೇತುವೆಯಲ್ಲಿ ನಡೆದಿದೆ.ಇಲ್ಲಿನ ಡೋಣಿ ನದಿಯಲ್ಲಿ ಪ್ರವಾಹ ಉಂಟಾಗಿ ಇಲ್ಲಿನ ಸೇತುವೆ ಮುಳುಗಡೆಯಾಗಿದೆ. ಈ ಸೇತುವೆಯ ಮೇಲೆ ಬಸ್ ಚಲಾಯಿಸಬೇಡ ಎಂದು ಗ್ರಾಮಸ್ಥರು ಹೇಳಿದರೂ ಬಸ್ ಚಾಲಕ ಅದನ್ನು ಲೆಕ್ಕಿಸದೇ ಬಸ್ ಚಲಾಯಿಸಿ ದುಸ್ಸಾಹಸ ಮೆರೆದಿದ್ದಾನೆ. ಒಂದು ಹಂತದಲ್ಲಿ ಬಸ್ ನದಿಗೆ ವಾಲಿದ್ದು,ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಈ ಚಾಲಕನ ವಿರುದ್ಧ ಕ್ರಮಕೈಗೊಳ್ಳುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾ #😱 ಸರ್ಕಾರಿ ಬಸ್ ಚಾಲಕನ ಚೆಲ್ಲಾಟ!
ಶನಿವಾರ, ಆಗಸ್ಟ್ 06, 2022
0


ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.