ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್- ಪ್ರಶ್ನೆಪತ್ರಿಕೆಯಲ್ಲಿ ಮಹತ್ವದ ಬದಲಾವಣೆ

Arun Kumar
0


 ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮ ಗೊಳಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಗಳ ಮಾದರಿಯಲ್ಲಿ ಮಹತ್ವದ ಬದಲಾವಣೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.



ದ್ವಿತಿಯ ಪಿಯೂಸಿಯ ಎಲ್ಲಾ ವಿಷಯಗಳಲ್ಲೂ 1 ಅಂಕದ ಪ್ರಶ್ನೆಗಳನ್ನು 20ಕ್ಕೆ ಹೆಚ್ಚಿಸುವ ಮೂಲಕ ಬಹು ಆಯ್ಕೆ ಮಾದರಿ ಪ್ರಶ್ನೆಗಳಿಗೆ ಹೆಚ್ಚು ಒತ್ತು ನೀಡಿದೆ. ಈ ಮೂಲಕ ವಿದ್ಯಾರ್ಥಿಗಳು ಸುಲಭವಾಗಿ ಉತ್ತರಿಸುವಂತೆ 2, 3, 4, 5 ಹಾಗೂ 6 ಅಂಕಗಳಿಗೆ ಇಳಿಸಲಾಗಿದೆ. ಪ್ರಶ್ನೆಗಳ ಸಂಖ್ಯೆಯನ್ನು ವಿಷಯವಾರು ಏರಿಳಿತ ಮಾಡಿದೆ. ಅಲ್ಲದೇ ಬಿಟ್ಟ ಸ್ಥಳ ಭರ್ತಿ ಮಾಡುವುದು, ಹೊಂದಿಸಿ ಬರೆಯುವುದು ಹೀಗೆ ಮಕ್ಕಳಿಗೆ ಉತ್ತಮವಾಗಿ ಉತ್ತರಿಸಲು ಸಾಧ್ಯವಾಗುವ ಪ್ರಶ್ನೆಗಳ ಮಾದರಿಯನ್ನು ಏರಿಕೆ ಮಾಡುವ ಮೂಲಕ ಸಹಾಯಕವಾಗುವಂತೆ ಮಾಡಿದೆ.


ಈ ಮೂಲಕ ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳು ಆಯಾ ಪ್ರಶ್ನೆಗೆ ಸುಲಭವಾಗಿ ಉತ್ತರಿಸಿ ಹೆಚ್ಚು ಅಂಕ ಪಡೆಯಲು ಸಾಧ್ಯವಾಗುತ್ತದೆ ಎಂಬುದು ಶಿಕ್ಷಣ ಇಲಾಖೆಯ ಅಭಿಪ್ರಾಯವಾಗಿದೆ.

ಇದರ ಜೊತೆಗೆ ಸುಲಭವೂ ಅಲ್ಲದ ಕಷ್ಟವೂ ಅಲ್ಲದ ಪ್ರಶ್ನೆಗಳ ಪ್ರಮಾಣವನ್ನು ಶೇ.40ಕ್ಕೆ ಮತ್ತು ಕಷ್ಟದ ಪ್ರಶ್ನೆಗಳ ಪ್ರಮಾಣವನ್ನು ಶೇ.20ಕ್ಕೆ ಇಳಿಸಲಾಗಿದೆ, ಶೇ.35ರಷ್ಟು ಜ್ಞಾನಾಧಾರಿತ ಪ್ರಶ್ನೆ, ಶೇ.30ರಷ್ಟು ತಿಳುವಳಿಕೆ ಸಾಮರ್ಥ್ಯದ ಪ್ರಶ್ನೆ ಶೇ.25ರಷ್ಟು ಅನ್ವಯಿಸುವಿಕೆ ಶೇ.10ರಷ್ಟು ಕೌಶಲ್ಯಾಧಾರಿತ ಪ್ರಶ್ನೆಗಳನ್ನು ಒಳಗೊಂಡಿರುವಂತೆ ಪ್ರಶ್ನೆ ಪತ್ರಿಕೆ ಮಾದರಿ ಸಿದ್ಧಪಡಿಸಲಾಗಿದೆ ಎಂದು ಪಿಯೂ ಮಂಡಳಿ ತಿಳಿಸಿದೆ. ಈ ಮೂಲಕ ಪಿಯುಸಿ ಫಲಿತಾಂಶವನ್ನು ಹೆಚ್ಚಿಸುವಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದ್ರೆ ತಪ್ಪಾಗಲಾರದು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)