ಭಾರೀ ಮಳೆ: ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 25ರಂದು ರಜೆ: ಪ್ರವಾಸಿಗರಿಗೆ ಎಚ್ಚರಿಕೆ

Arun Kumar
0

 

ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು  ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಘೋಷಿಸಿದ್ದಾರೆ.

ನಿರಂತರವಾಗಿ ಮಳೆಯಾಗುತ್ತಿದ್ದ ಪರಿಣಾಮ  ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು,ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು , ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)