ಬೆಂಗಳೂರು: ಬೆಂಗಳೂರು ನಗರದ ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ ಆತನಿಂದ ಸುಮಾರು 60 ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.
ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರು ರಾಜಸ್ಥಾನದಿಂದ ಕೊಲಿಯ ಮುಖಾಂತರ ಮಾದಕ ವಸ್ತುವಾದ ಓಪಿಎಂ ಪಪ್ಪಿಯನ್ನು ಕಡಿಮೆ ಬೆಲೆಗೆ ಹರಿಸಿಕೊಂಡು ಅದನ್ನು ಮನೆಯಲ್ಲಿ ಮಿಕ್ಸ್ ಗ್ರೈಂಡರ್ ಮೂಲಕ ಪುಡಿಮಾಡಿ ರಾತ್ರಿ ಪೂರಾ ನೀರಿನಲ್ಲಿ ನೆನೆಸಿಟ್ಟು ನಂತರ ಅದರ ನೀರನ್ನು ಪಾರ್ಟಿ ಮತ್ತು ಇತರೆ ಮೋಜು-ಮಸ್ತಿಯ ಕೂಟಗಳಲ್ಲಿ ಬರುವ ಕಾಲೇಜು ವಿದ್ಯಾರ್ಥಿಗಳು, ಸಾವೇರ್ ಇ೦ಜಿನಿಯರುಗಳಿಗೆ ನೀಡುವ ಕೆಲಸ ಈ ಆರೋಪಿಗಳದ್ದಾಗಿತ್ತು.
ಅಲ್ಲದೇ ಪೊಲೀಸರು ಪುಡಿಯನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಒಬ್ಬ ವ್ಯಕ್ತಿಯನ್ನು ಬಂಧಿಸಿ ಆತನು ಮಾರಾಟ ಮಾಡಲು ವಶದಲ್ಲಿ ಇಟ್ಟುಕೊಂಡಿದ್ದ 55 ಕೆ.ಜಿ ಮಾದಕ ವಸ್ತುವನ್ನು ಮತ್ತು ಸಾಗಾಣಿಕೆಗೆ ಬಳಸುತ್ತಿದ್ದ ಒಂದು ಅಪೆ ಲಗೇಜ್ ಆಟೋವನ್ನು ವಶಪಡಿಸಿಕೊಂಡಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.