ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 7ರಂದು ಕೂಡ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುನ್ನೆಚ್ಚರಿಕೆ:
ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1 0 7 7 ಹಾಗೂ ದೂರವಾಣಿ: 0824 — 2 4 4 2 5 9 0 ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.