ಪತ್ನಿ ಇಲ್ಲದವರು ಮುಂದಿನ ಪ್ರಧಾನಮಂತ್ರಿ ಆಗಕೂಡದು ಎಂದು ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಪಿಎಂ ನರೇಂದ್ರ ಮೋದಿ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಮುಂಬರುವ 2024 ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಂದಾಗುತ್ತಿರುವ ಬೆಳವಣಿಗೆಗಳ ನಡುವೆ ಲಾಲೂ ಪ್ರಸಾದ್ ಅವರು ಈ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಹೆಂಡತಿ ಜಶೋದಾ ಬೆನ್ ಅವರನ್ನು ತ್ಯಜಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿ ಪದೇ ಪದೇ ಟ್ರೋಲಿಗೊಳಗಾಗುತ್ತಿರುವ ಹಿನ್ನೆಲೆಯಲ್ಲಿ ಯಾದವ್ ಹೇಳಿಕೆ ಗಮನ ಸೆಳೆದಿದೆ.
“ಯಾರು ಪ್ರಧಾನಿಯಾಗುತ್ತಾರೋ ಅವರು ಪತ್ನಿ ಇಲ್ಲದೆ ಇರಬಾರದು. ಪತ್ನಿ ಇಲ್ಲದೆ ಪ್ರಧಾನಿ ನಿವಾಸದಲ್ಲಿ ಇರುವುದು ತಪ್ಪು. ಇದನ್ನು ಹೋಗಲಾಡಿಸಬೇಕು…” ಎಂದು ಲಾಲು ಪ್ರಸಾದ್ ಯಾದವ್ ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ, ಪಾಟ್ನಾದಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ರಾಹುಲ್ ಗಾಂಧಿಗೆ ಮದುವೆಯಾಗಲು ಲಾಲೂ ಯಾದವ್ ಸಲಹೆ ನೀಡಿದ್ದರು.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.