ದಕ್ಷಿಣ ಕನ್ನಡ: ಮುಳುಗು ಸೇತುವೆಯಲ್ಲಿ ಸಿಲುಕಿದ ಪಿಕಪ್ ವಾಹನ

Arun Kumar
0

ಮುಳುಗು ಸೇತುವೆಯೊಂದರಲ್ಲಿ ಚಾಲಕ ಪಿಕಪ್ ಚಲಾಯಿಸಿ ನಡು ನೀರಿನಲ್ಲಿ ಸಿಲುಕಿ ಹಾಕಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ  ಕೆದಿಲ ಗ್ರಾಮದ ಕಾಂತುಕೋಡಿಯಲ್ಲಿ ನಡೆದಿದೆ.

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಾಂತುಕೋಡಿ -ಪಡೀಲಿಗೆ ಸಂಪರ್ಕ ಮಾಡುವ ರಸ್ತೆಯ ಕಾಂತುಕೋಡಿ ಎಂಬಲ್ಲಿನ ಸೇತುವೆಯೊಂದು ಸಂಪೂರ್ಣ ಮುಳುಗಡೆಯಾಗಿದೆ. ಈ ಸೇತುವೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕಪ್ ಚಾಲಕ ತಮ್ಮ ವಾಹನವನ್ನು‌ ಚಲಾಯಿಸಿಕೊಂಡು ಬಂದಿದ್ದು ಸೇತುವೆಯ ಮಧ್ಯದಲ್ಲಿ ಸಿಲುಕಿಕೊಂಡಿದ್ದಾರೆ.

ಕೂಡಲೇ ಎಚ್ಚೆತ್ತ ಸ್ಥಳೀಯರು ವಾಹನದಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ. ಪಿಕಪ್ ವಾಹನವು ಪಡೀಲು ಭಾಗದಿಂದ ಕೆದಿಲ ಭಾಗಕ್ಕೆ ತೆರಳುತ್ತಿತ್ತು. ಸೇತುವೆ ಮಳೆಗಾಲದಲ್ಲಿ ನಿತ್ಯ ನಿರಂತರವಾಗಿ ಮುಳುಗಡೆಯಾಗುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)