ಇದನ್ನು ಹುಚ್ಚುತನ ಅನ್ನಬೇಕೋ, ಮೋಡಿ ಅನ್ನಬೇಕೋ ಗೊತ್ತಿಲ್ಲ. ಈಕೆ ಪಾಕಿಸ್ತಾನದವಳು. ಆತ ಭಾರತದವ. ಪಬ್ ಜೀ ಗೆಳೆಯನನ್ನು ನೋಡಲು ತನ್ನ ನಾಲ್ಕು ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಮಹಿಳೆಯ ಪತಿ ಇದೀಗ ತನ್ನ ಪತ್ನಿಯನ್ನು ಪಾಕಿಸ್ತಾನಕ್ಕೆ ಕಳುಹಿಸುವಂತೆ ಭಾರತಕ್ಕೆ ಮನವಿ ಮಾಡಿದ್ದಾನೆ.
ಈ ಬಗ್ಗೆ ಸೌದಿ ಅರೇಬಿಯಾದಲ್ಲಿರುವ ಪಾಕಿಸ್ತಾನ ಮಹಿಳೆಯ ಪತಿ ಗುಲಾಮ್ ಹೈದರ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತದ ಸರ್ಕಾರವನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ. ನನ್ನ ಪತ್ನಿ ಹಾಗೂ ಮಕ್ಕಳನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡಿ. ನನ್ನ ಮಕ್ಕಳು ಎಲ್ಲಿದ್ದಾರೆ ಎಂದು ನನಗೆ ಗೊತ್ತಾಗುತ್ತಿಲ್ಲ. ನನ್ನ ಮಕ್ಕಳ ಬಗ್ಗೆ ಮಾಹಿತಿ ಕೊಟ್ಟ ಭಾರತೀಯ ಮಾಧ್ಯಮಗಳಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನಾನು ಬಡವ, ನನ್ನ ಮಕ್ಕಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಅವರನ್ನು ದಯವಿಟ್ಟು ಪಾಕಿಸ್ತಾನಕ್ಕೆ ಕಳುಹಿಸಿಕೊಡಿ ಎಂದು ವಿನಂತಿಸಿದ್ದಾರೆ.
ಗ್ರೇಟರ್ ನೋಯ್ಡಾ ಮೂಲದ ನಿವಾಸಿಯಾಗಿರುವ ಸಚಿನ್ ಜನಪ್ರಿಯ ಮೊಬೈಲ್ ಗೇಮ್ ಪಬ್ ಜೀ ಮೂಲಕ ಪಾಕಿಸ್ತಾನದ ಮಹಿಳೆ ಜೊತೆಗೆ ಸ್ನೇಹ ಬೆಳೆದಿದೆ. ಸ್ನೇಹ ಪ್ರೀತಿಯಾಗಿ ಇಬ್ಬರು ಪ್ರೀತಿಸಿದ್ದಾರೆ. ಈ ಹಿನ್ನೆಲೆ ಸಚಿನ್ ಅನ್ನು ಭೇಟಿಯಾಗಲು ಪಾಕಿಸ್ತಾನದಿಂದ ತನ್ನ ನಾಲ್ಕು ಮಕ್ಕಳನ್ನು ಕರೆದುಕೊಂಡು, ಅಕ್ರಮವಾಗಿ ನೇಪಾಳದ ಮೂಲಕ ಭಾರತಕ್ಕೆ ಬಂದಿದ್ದಾಳೆ.
ಬಳಿಕ ಹಲವು ದಿನಗಳಿಂದ ಇಬ್ಬರು ನೋಯ್ಡಾದಲ್ಲಿ ವಾಸಿಸುತ್ತಿದ್ದರು. ವಿಷಯ ತಿಳಿದ ಬಳಿಕ ಪೊಲೀಸರು ಈ ಇಬ್ಬರನ್ನು ಹಾಗೂ ನಾಲ್ಕು ಮಕ್ಕಳನ್ನು ಬಂಧಿಸಿದ್ದು ವಿಚಾರಣೆ ಮಾಡುತ್ತಿದೆ. ಇದೀಗ ಪಾಕ್ ಮಹಿಳೆಯ ಪತಿ, ತನ್ನ ಪತ್ನಿ ಮಕ್ಕಳನ್ನು ಪಾಕಿಸ್ತಾನಕ್ಕೆ ಕಳುಹಿಸುವಂತೆ ಮನವಿ ಮಾಡಿದ್ದಾನೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.