ಕಲ್ಲಂಗಡಿ ಹಣ್ಣು, ಬೀಜದಲ್ಲಿರುವ ಆರೋಗ್ಯಕರ ಪ್ರಯೋಜನಗಳು

Arun Kumar
0

 

ರಸಭರಿತ ಹಣ್ಣು ಎಂದಾಕ್ಷಣ ನೆನಪಿಗೆ ಬರುವ ಮೊದಲ ಹಣ್ಣು ಎಂದರೆ, ಅದು ಕಲ್ಲಂಗಡಿ ಹಣ್ಣು. ಸಾಕಷ್ಟು ಮಂದಿ ಕಲ್ಲಂಗಡಿ ಹಣ್ಣು ಇಷ್ಟಪಟ್ಟು ಸೇವಿಸುತ್ತಾರೆ. ಹಣ್ಣಿನಲ್ಲಿ ನೀರಿನಾಂಶ ಹೆಚ್ಚಾಗಿರುವುದರಿಂದ ಬೇಸಿಗೆಯಲ್ಲಂತೂ ಈ ಹಣ್ಣು ಅಮೃತವೆಂದೇ ಭಾಸವಾಗುವುದುಂಟು.
ರಸಭರಿತ ಹಣ್ಣು ಎಂದಾಕ್ಷಣ ನೆನಪಿಗೆ ಬರುವ ಮೊದಲ ಹಣ್ಣು ಎಂದರೆ, ಅದು ಕಲ್ಲಂಗಡಿ ಹಣ್ಣು. ಸಾಕಷ್ಟು ಮಂದಿ ಕಲ್ಲಂಗಡಿ ಹಣ್ಣು ಇಷ್ಟಪಟ್ಟು ಸೇವಿಸುತ್ತಾರೆ. ಹಣ್ಣಿನಲ್ಲಿ ನೀರಿನಾಂಶ ಹೆಚ್ಚಾಗಿರುವುದರಿಂದ ಬೇಸಿಗೆಯಲ್ಲಂತೂ ಈ ಹಣ್ಣು ಅಮೃತವೆಂದೇ ಭಾಸವಾಗುವುದುಂಟು. ಈ ಹಣ್ಣು ಹೆಚ್ಚು ಸಿಹಿಯಾಗಿರುವುದರ ಜತೆಗೆ ಆಂಟಿ ಆಕ್ಸಿಡೆಂಟ್​ಗಳನ್ನು ಹೊಂದಿರುತ್ತದೆ. ಜತೆಗೆ ಜೀವಸತ್ವಗಳು, ಖನಿಜಗಳು ಮತ್ತು ಇತರ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ.

ಕಲ್ಲಂಗಡಿ ಹಣ್ಣಿನಲ್ಲಿ ಕ್ಯಾಲೊರಿ ಕಡಿಮೆ ಇರುತ್ತದೆ. ಇದರಲ್ಲಿ ವಿಟಮಿನ್ ಸಿ ಮತ್ತು ಎ ಅಂಶವಿರುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಕೇವಲ ಹಣ್ಣಷ್ಟೇ ಅಲ್ಲ, ಹಣ್ಣಿನ ಸಿಪ್ಪೆ ಹಾಗೂ ಬೀಜವನ್ನೂ ಬಳಕೆ ಮಾಡಿ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಸಾಕಷ್ಟು ಜನರು ಅಳವಡಿಸಿಕೊಳ್ಳುತ್ತಿದ್ದು, ನೀರಿನಾಂಶ ಹೆಚ್ಚಾಗಿರುವ ಕಲ್ಲಂಗಡಿ ಹಣ್ಣನ್ನು ಹೆಚ್ಚಾಗಿ ಸೇವನೆ ಮಾಡುತ್ತಿದ್ದಾರೆ. ಹಣ್ಣಷ್ಟೇ ಅಲ್ಲ, ಅವುಗಳ ಸಿಪ್ಪೆ ಹಾಗೂ ಬೀಜಗಳನ್ನು ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿಕೊಂಡು ಸೇವನೆ ಮಾಡುತ್ತಿದ್ದಾರೆ.

ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿ ವಿವಿಧ ಖನಿಜಗಳು ಮತ್ತು ಸತು, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಪ್ರೋಟೀನ್‌ಗಳಂತಹ ಪೋಷಕಾಂಶಗಳಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲೂ ಇದು ಕೊಡುಗೆ ನೀಡುತ್ತವೆ, ಪೌಷ್ಠಿಕಾಂಶ ಪಡೆಯಲು ಔಷಧಗಳ ಸೇನೆಗಳ ಬದಲು ಇವುಗಳ ಬೀಜಗಳ ಬಳಕೆ ಉತ್ತಮ ಮಾರ್ಗವಾಗಿದೆ ಎದು ವೈದ್ಯರು ಹೇಳುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)