ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ವಿಚಿತ್ರ ಕಾಯಿಲೆಯೊಂದು ಮತ್ತೆ ಬೆಳಕಿಗೆ ಬಂದಿದ್ದು, ವೈದ್ಯಲೋಕಕ್ಕೆ ಸವಾಲಾಗಿ ಪರಿಣಮಿಸಿದೆ, ಮಕ್ಕಳಿಗೆ ಈ ಕಾಯಿಲೆ ಬಂದರೆ 18 ವರ್ಷ ತುಂಬುವ ಅಷ್ಟರಲ್ಲಿಯೇ ಆ ಮಗು ಮರಣ ಹೊಂದುತ್ತಾರೆನ್ನುವ ಆತಂಕ ಪಾಲಕರನ್ನು ಕಾಡುತ್ತಿದೆ.
ಕೈ ಕಾಲು, ಮುಖದ ಮೇಲೆ ಕಪ್ಪು ಬಿಳಿ ಚುಕ್ಕೆಗಳು ಕಾಣಿಸಿ ಕೊಳ್ಳುವ ರೋಗಕ್ಕೆ ಚುಕ್ಕಿ ಚರ್ಮರೋಗ ಎನ್ನಲಾಗಿದೆ. ಇದು ಒಂದು ಬಾರಿ ಮಕ್ಕಳಿಗೆ ಅಂಟಿಕೊಂಡರೆ ಸಾವು ಖಚಿತ ಎಂಬ ಮಾತಿದ್ದು ಈ ರೀತಿ ಮಾರಕ ಕಾಯಿಲೆ ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರು, ಭದ್ರಯ್ಯನಹಳ್ಳಿ, ಶೆಟ್ಟಳ್ಳಿ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
2015ರಲ್ಲಿ ಇದೇ ಭಾಗದಲ್ಲಿ ಕಾಣಿಸಿಕೊಂಡಿದ್ದ ಈ ಕಾಯಿಲೆ ಇದಾಗಿದೆ. ಈ ಕಾಯಿಲೆ ಅಂಟಿದ ಮಕ್ಕಳು 18 ವರ್ಷದ ವರೆಗೆ ಬದುಕೋದೆ ಹೆಚ್ಚು ಎನ್ನುತ್ತಿದ್ದಾರೆ ವೈದ್ಯರು. ಇನ್ನೂ ಈ ಚುಕ್ಕಿ ಚರ್ಮ ರೋಗದಿಂದ ಹಲವು ಮಕ್ಕಳು ಸಾವನ್ನಪ್ಪುತ್ತಿವೆ. ಸದ್ಯ ಔಷಧಿಯೇ ಇಲ್ಲದ ಕಾಯಿಲೆಗೆ ಸಣ್ಣ ಸಣ್ಣ ಕಂದಮ್ಮಗಳು ಹೈರಾಣಾಗಿವೆ.
ಸದ್ಯ, ಹನೂರು ಸುತ್ತಲಿನ 4 ಕ್ಕೂ ಹೆಚ್ಚಿನ ಮಕ್ಕಳಲ್ಲಿ ರೋಗ ಲಕ್ಷಣ ಪತ್ತೆಯಾಗಿದೆ. ಇತ್ತ ವೈದ್ಯರ ಪ್ರಕಾರ ಈ ರೋಗವು ಅನುವಂಶೀಕವಾಗಿ ಕಾಣಿಸಿಕೊಳ್ಳುತ್ತಿದೆ ಎನ್ನಲಾಗುತ್ತಿದೆ. ಇದರಿಂದ ಮಕ್ಕಳು ಶಾಲೆಗೆ ಹೋಗಲು ಸಹ ಹಿಂದೇಟು ಹಾಕುವ ಪರಿಸ್ಥಿತಿ ಸಹ ನಿರ್ಮಾಣವಾಗಿದೆ. ಇನ್ನೂ ಈ ರೋಗ ಕಾಣಿಸಿಕೊಂಡರೆ ಆ ಮಗು 18 ವರ್ಷ ತಲುಪುವ ಅಷ್ಟರಲ್ಲಿಯೇ ಸಾವನ್ನಪ್ಪುವುದು ಖಚಿತ ಎಂದು ನಿರ್ಧಾರ ಮಾಡುವ ಸ್ಥಿತಿಗೆ ತಲುಪಿದ್ದಾರೆ ಇಲ್ಲಿನ ಬಡ ಜನರು.
ಈ ಕಾಯಿಲೆ 2015 ರಲ್ಲಿ ಕಾಣಿಸಿಕೊಂಡಿದ್ದ ವೇಳೆ ಶೆಟ್ಟಹಳ್ಳಿ, ಕುರಟ್ಟಿಹೊಸೂರು ಗ್ರಾಮದಲ್ಲಿ 8 ಮಕ್ಕಳು ಅಸುನೀಗಿದ್ದರು. ಸದ್ಯ, ಗ್ರಾಮಗಳಿಗೆ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಚಂದ್ರಶೇಖರ್, ಹನೂರು ತಾಲೂಕು ಆರೋಗ್ಯ ಇಲಾಖೆಯು ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.