ದಕ್ಷಿಣ ಕನ್ನಡ: ಎರಡು ಕಾರುಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಇಂದು ನಡೆದಿದೆ.
ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ ಅಪಘಾತ ಸಂಭವಿಸಿದೆ. ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಕಾರನ್ನು ಸುಮಾರು ದೂರು ದೂಡಿಕೊಂಡು ಹೋಗಿದ್ದಲ್ಲದೆ ಕಾರು ಉರುಳಿಬಿದ್ದಿದೆ. ಕಾರಿನೊಳಗಿದ್ದ ಪ್ರಯಾಣಿಕರನ್ನು ಹಿಂಬದಿಯ ಗಾಜು ಒಡೆದು ಹೊರಕ್ಕೆ ತೆಗೆಯಲಾಗಿದೆ. ಓಮ್ನಿ ಕಾರು ಚಾಲಕ ರಾಯ್ಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸೇರಿದಂತೆ ಮೂವರು ಮತ್ತು ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೆ ಗಾಯಗಳಾಗಿವೆ. ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಓಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.