‘ಮೋದಿ ಉಪನಾಮ’ ಕುರಿತ ಮಾನನಷ್ಟ ಮೊಕದ್ದಮೆ: ಗುಜರಾತ್ ಹೈಕೋರ್ಟ್ ನಲ್ಲಿ ರಾಹುಲ್ ಗಾಂಧಿ ಮರುಪರಿಶೀಲನಾ ಅರ್ಜಿ ವಿಚಾರಣೆ: ತೀರ್ಪಿನ ಸುತ್ತ ಕುತೂಹಲ

Arun Kumar
0
ಪ್ರಧಾನಮಂತ್ರಿ ‘ನರೇಂದ್ರ ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತನ್ನ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ಕುರಿತು ಗುಜರಾತ್ ಹೈಕೋರ್ಟ್ ಶುಕ್ರವಾರ ತನ್ನ ತೀರ್ಪನ್ನು ನೀಡಲಿದೆ.
ಈ ಹಿಂದೆ ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಮಧ್ಯಂತರ ಜಾಮೀನನ್ನು ನ್ಯಾಯಾಲಯ ನಿರಾಕರಿಸಿತ್ತು. ಆದರೆ ಅವರ ಮನವಿಯನ್ನು ಪರಿಗಣನೆಗೆ ಕಾಯ್ದಿರಿಸಿತ್ತು.
ಒಂದು ವೇಳೆ ರಾಹುಲ್ ಗಾಂಧಿ ಅವರ ಶಿಕ್ಷೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದರೆ, ಅವರ ಅನರ್ಹತೆಯನ್ನು ಹಿಂತೆಗೆದುಕೊಳ್ಳಬಹುದು. ಒಂದು ವೇಳೆ ರಾಹುಲ್ ಗಾಂಧಿ ಅವರ ಅಮಾನತಿಗೆ ತಡೆ ನೀಡದಿದ್ದರೆ, ಗುಜರಾತ್ ಹೈಕೋರ್ಟ್ ನ ಉನ್ನತ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿಗೆ ಅವಕಾಶ ಕೂಡಾ ಇದೆ.
ಪ್ರಸ್ತುತ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಎರಡು ಮತ್ತು ಆರು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ.
ಮೋದಿ ಉಪನಾಮ ಪ್ರಕರಣ:
ಮಾರ್ಚ್ 23 ರಂದು ಸೂರತ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಚ್.ಎಚ್.ವರ್ಮಾ ಅವರು ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರು.
ನ್ಯಾಯಾಲಯದಿಂದ ಜಾಮೀನು ಪಡೆದ ನಂತರ, ರಾಹುಲ್ ಗಾಂಧಿ ಅವರ ವಕೀಲ ಕಿರಿತ್ ಪನ್ವಾಲಾ ಅವರು ತೀರ್ಪಿನ ವಿರುದ್ಧ ಸೂರತ್ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಬಿಜೆಪಿ ಶಾಸಕ ಮತ್ತು ಗುಜರಾತ್ ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ಮೇರೆಗೆ ‘ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವಾಗಿ ಹೇಗೆ ಹೊಂದಿದ್ದಾರೆ..?’ ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
2019 ರ ಲೋಕಸಭಾ ಚುನಾವಣೆಗೆ ಮುನ್ನ ಕರ್ನಾಟಕದ ಕೋಲಾರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)