ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಮೂಡಿಗೆರೆ, ಕಳಸ, ಶೃಂಗೇರಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ.
ಜಿಲ್ಲೆಯ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕುದುರೆಮುಖ ಸಾಲಿನಲ್ಲಿ ನಿರಂತರ ಮಳೆಯಿಂದಾಗಿ ಭದ್ರಾ ನದಿ ಒಳ ಹರಿವಿನಲ್ಲಿ ಏರಿಕೆಯಾಗಿದೆ.
ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಗಾ ನದಿ ಹರಿವಿನಲ್ಲಿ ಭಾರೀ ಏರಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.