ಭೋಪಾಲ್: ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರ ಮೇಲೆ ಜಾತಿ ಪೀಡಕನೋರ್ವ ಮೂತ್ರ ಮಾಡಿ ವಿಕೃತಿ ಮೆರೆದ ಘಟನೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಸಂತ್ರಸ್ತ ವ್ಯಕ್ತಿ ದಶಮತ್ ರಾವತ್ ಅವರನ್ನು ತಮ್ಮ ನಿವಾಸಕ್ಕೆ ಕರೆದು ಅವರ ಪಾದ ತೊಳೆದು ಕ್ಷಮೆಯಾಚಿಸಿದ್ದಾರೆ.
ವೈರಲ್ ಆಗಿದ್ದ ವಿಡಿಯೋದ ದೃಶ್ಯ ನೋಡಿ ತುಂಬಾ ನೋವಾಗಿತ್ತು. ಅದಕ್ಕಾಗಿ ನಾನು ನಿನ್ನ ಕ್ಷಮೆಯಾಚಿಸುತ್ತೇನೆ. ಜನರು ನನಗೆ ದೇವರಿದ್ದಂತೆ ಎಂದು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಇನ್ನೂ ಮೂತ್ರ ವಿಸರ್ಜನೆ ಮಾಡಿದ್ದ ಪಾಪಿಯನ್ನು ನಿನ್ನೆಯೇ ಬಂಧಿಸಲಾಗಿದೆ. ಈ ಘಟನೆ ಮೇಲ್ಜಾತಿಗಳು ಎಂಬ ಮನಸ್ಥಿತಿ ಹೊಂದಿರುವ ವ್ಯಕ್ತಿಗಳ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.