ಲಂಚ ಪಡೆಯುತ್ತಿದ್ದ ಫುಡ್ ಇನ್‍’ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

Arun Kumar
0

ಬೆಂಗಳೂರು: ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಒಇಡಿಸಿ ಹಿಡಿದ ಘಟನೆ ನೆಲಮಂಗಲ ಬಳಿಯ ಸೊಂಡೇಕೊಪ್ಪದಲ್ಲಿ ನಡೆದಿದೆ.

ರಂಗದಾಮಯ್ಯ ಕೆ.ಜಿ ಸರ್ಕಲ್ ಬಳಿಯಿರುವ ತಹಶೀಲ್ದಾರ್ ಆಫೀಸ್‍ ನ ಫುಡ್ ಇನ್‍ ಸ್ಪೆಕ್ಟರ್ ಆಗಿರುವ ಮಹಂತೇಗೌಡ ಬಳಿ ಟ್ರೇಡ್ ಲೈಸೆನ್ಸ್ ಮಾಡಿಸಲು ತೆರಳಿದ್ದರು. ಈ ವೇಳೆ ಅಧಿಕಾರಿ 1 ಲಕ್ಷ ರೂ. ಹಣವನ್ನು ಲಂಚವನ್ನಾಗಿ ಕೇಳಿದ್ದ. ಮುಂಗಡವಾಗಿ 43 ಸಾವಿರ ರೂ. ಹಣವನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ.

ಲೋಕಾಯುಕ್ತ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಪಡೆದು ಟ್ರ್ಯಾಪ್ ಮಾಡಿದ್ದಾರೆ. ಹಣ ಪಡೆಯುವ ವೇಳೆ ಟ್ರ್ಯಾಪ್ ಎಂದು ತಿಳಿದು ಪರಾರಿಯಾಗಲು ಮಹಂತೇಗೌಡ ಯತ್ನಿಸಿದ್ದಾನೆ. ಹಣ ಪಡೆದು ಸುಮಾರು 15 ಕಿ.ಮೀ ತೆರಳಿದ್ದಾನೆ. ಈ ವೇಳೆ ಮಹಂತೇಗೌಡ ತಪ್ಪಿಸಿಕೊಳ್ಳಲು ಲೋಕಾಯುಕ್ತ ಅಧಿಕಾರಿಗಳ ಮೇಲೆ ಕಾರು ಹರಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ.

ಆದರೆ ಬೆನ್ನಟ್ಟಿದ ಲೋಕಾ ಅಧಿಕಾರಿಗಳು ಮಹಂತೇಗೌಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.   ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಲೋಕಾಯುಕ್ತ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)