ಮಂಗಳೂರು: ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್

Arun Kumar
0

 

ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ನೀಡಲಾಗಿದೆ ಎಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಅವರು ಇಂದು ಮಂಗಳೂರು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ನೀಡಲಾಗಿದ್ದು

ಇಂದು ಕಾ‌ನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ಸಾಧ್ಯತೆ ಇದೆ. ಇವರು ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಭಾಗಿಯಾಗಿದ್ದರು. ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ಈ ಮೂವರು ನೈತಿಕ ಪೊಲೀಸ್ ಗಿರಿ ನಡೆಸಿದ್ದರು.

ಹೀಗಾಗಿ ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳಿಂದ ಗಡೀಪಾರಿಗೆ ವರದಿ ಮಾಡಲಾಗಿತ್ತು. ಹೀಗಾಗಿ ಅಧಿಕೃತವಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗ ಮಾಡಲಾಗ್ತಿದೆ ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)