ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಸಿಗಲಿದೆ ಶೈಕ್ಷಣಿಕ ಪ್ರೋತ್ಸಾಹ ಧನ

Arun Kumar
0

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಎಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2022-23 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್, 31 ಕೊನೆಯ ದಿನವಾಗಿದೆ. ಕಾರ್ಮಿಕರ ಮಾಸಿಕ ವೇತನ 35 ಸಾವಿರ ರೂ. ಮೀರಿರಬಾರದು.(ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು).

ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‍ಸೈಟ್‍ನಲ್ಲಿ www.klwbapps.karnataka.gov.in ಅರ್ಜಿ ಸಲ್ಲಿಸಬಹುದು. (ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಪ.ಜಾ/ಪ.ಪಂ. ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು)

ಹೆಚ್ಚಿನ ಮಾಹಿತಿಗೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1 ನೇ ಮತ್ತು 2 ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 080-23475188, 8277291175, 8277120505, 9141585402, 9141602562 ನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)