ಆಗಸ್ಟ್ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ.
Veega News Kannada |
IPPB Recruitment 2023: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (India Post Payments Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಂದು ಜನರಲ್ ಮ್ಯಾನೇಜರ್/ ಚೀಫ್ ಫೈನಾನ್ಸ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು 01/07/2023ಕ್ಕೆ ಕನಿಷ್ಠ 38 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 3,27,000-3,70,000
ಉದ್ಯೋಗದ ಸ್ಥಳ:
ದೆಹಲಿ
ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳು- 150 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 750 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಟೆಸ್ಟ್
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.