ಆಗಸ್ಟ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು.
Canara Bank Recruitment 2023: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆದ ಕೆನರಾ ಬ್ಯಾಂಕ್ (Canara Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 500 ಪ್ರೊಬೇಶನರಿ ಆಫೀಸರ್/ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗದ ಹುಡುಕಾಟದಲ್ಲಿದ್ದರೆ ಈಗಲೇ ಅರ್ಜಿ ಹಾಕಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೆನರಾ ಬ್ಯಾಂಕ್ |
ಹುದ್ದೆ | ಪ್ರೊಬೇಶನರಿ ಆಫೀಸರ್/ ಮ್ಯಾನೇಜ್ಮೆಂಟ್ ಟ್ರೈನಿ |
ಒಟ್ಟು ಹುದ್ದೆ | 500 |
ವಿದ್ಯಾರ್ಹತೆ | ಪದವಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಆಗಸ್ಟ್ 21, 2023 |
ಶೈಕ್ಷಣಿಕ ಅರ್ಹತೆ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2023ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/08/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 21, 2023
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PwBD ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
SC/ST/PwD ಅಭ್ಯರ್ಥಿಗಳು- 175 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 850 ರೂ.
ಪಾವತಿಸುವ ಬಗೆ- ಆನ್ಲೈನ್
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.