Bengaluru Jobs: ನಿಮ್ಹಾನ್ಸ್​ನಲ್ಲಿ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ- ತಿಂಗಳಿಗೆ 68,000 ಸಂಬಳ

Arun Kumar
0

 

ಸೆಪ್ಟೆಂಬರ್ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಬೇಕು.

NIMHANS Recruitment 2023: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೈಂಟಿಸ್ಟ್ ಬಿ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆನಿಮ್ಹಾನ್ಸ್
ಹುದ್ದೆಸೈಂಟಿಸ್ಟ್ ಬಿ
ಒಟ್ಟು ಹುದ್ದೆ1
ವಿದ್ಯಾರ್ಹತೆಎಂಬಿಬಿಎಸ್, ಎಂ.ಡಿ
ವೇತನಮಾಸಿಕ ₹ 68,875
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಸೆಪ್ಟೆಂಬರ್ 13, 2023

ವಿದ್ಯಾರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂ.ಡಿ ಪೂರ್ಣಗೊಳಿಸಿರಬೇಕು.

ಅನುಭವ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ರಿಸರ್ಚ್/ ಟೀಚಿಂಗ್ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.


ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 68,875


ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ mahadevananita@gmail.com, nimhansbrainbank@gmail.com ಗೆ ಸೆಪ್ಟೆಂಬರ್ 13ರೊಳಗೆ ಕಳುಹಿಸಬೇಕು.


ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 23/08/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಸೆಪ್ಟೆಂಬರ್ 13, 2023


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)