ಯುವ ವರದಿಗಾರನನ್ನು ತಡೆದು ಅನೈತಿಕ ಪೊಲೀಸ್ ಗಿರಿ

Arun Kumar
0

ಮಂಗಳೂರು ನಗರದಲ್ಲಿ ಯುವ ವರದಿಗಾರನನ್ನು ತಡೆದು ಧರ್ಮದ ಹೆಸರೆತ್ತಿ ಅವಾಚ್ಯವಾಗಿ ನಿಂದಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣ ನಡೆದಿದೆ.

ನಗರದ ವೆಬ್‌ ಸೈಟ್ ಒಂದರ ಯುವ ವರದಿಗಾರ ಅಭಿಜಿತ್ ಅವರು ಕಾವೂರು ಜಂಕ್ಷನ್ ಬಳಿಯ ಹೊಟೇಲೊಂದರಲ್ಲಿ ತನ್ನ ಕಾಲೇಜಿನ ಸಹಪಾಠಿಯಾಗಿದ್ದ ಯುವತಿ ಜತೆ ಊಟ ಮುಗಿಸಿ ಹೊರ ಬರುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬಂದು ‘ನೀನು ಬ್ಯಾರಿಯೊಂದಿಗೆ ಏನು ಮಾತನಾಡುತ್ತಿ. ನೀನು ಬ್ಯಾರಿಯ ಇಲ್ಲಿಂದ ಹೊರಡು’ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಈ ಸಂದರ್ಭ ಅಭಿಜಿತ್ ಅವರು ತಾನು ವರದಿಗಾರ ಎಂದು ತನ್ನ ಐಡಿ ಕಾರ್ಡ್ ತೋರಿಸಿದರೂ ಮತ್ತೆ ಅವಾಚ್ಯ ಶಬ್ಧಗಳಿಂದ ಆ ಅಪರಿಚಿತ ವ್ಯಕ್ತಿ ನಿಂದಿಸಿದ್ದ. ಈ ಬಗ್ಗೆ ಅಭಿಜಿತ್ ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಆ ಸಂದರ್ಭದಲ್ಲಿ ಆ ವ್ಯಕ್ತಿಯ ಕಾರಿನ ನಂಬರ್ ನೋಟ್ ಮಾಡಿದ್ದರು. ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರಿಂದ ಅವರ ನಿರ್ದೇಶನದ ಮೇರೆಗೆ ಆರೋಪಿ ಕೋಟೆಕಾರಿನ ಚೇತನ್  ಕುಮಾರ್ ಹಾಗೂ ಯೆಯ್ಯಾಡಿಯ ನವೀನ್ ಎಂಬುವವರನ್ನು ಬಂಧಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)