8 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ್ದ ಪ್ರಕರಣವನ್ನು ಮುಚ್ಚಿ ಹಾಕುತ್ತಿರುವುದನ್ನು ವರದಿ ಮಾಡಿದ ಸಂದೀಪ್ ಮಹಾಜನ್ ಎಂಬ ಪತ್ರಕರ್ತನ ಮೇಲೆ ಶಿವಸೇನೆಯ ಏಕನಾಥ್ ಶಿಂಧೆ ಬಣದ ಬೆಂಬಲಿಗರು ಹಲ್ಲೆ ನಡೆಸಿ ಅನೈತಿಕ ಮೆರೆದಿದ್ದಾರೆ.
ನಡುರಸ್ತೆಯಲ್ಲೇ ಮೂವರು ಆತನನ್ನು ಮನಸೋ ಇಚ್ಛೆ ಥಳಿಸಿದ್ದು, ಇದರ ವಿಡಿಯೊ ವೈರಲ್ ಆಗುತ್ತಿದ್ದು ರಾಷ್ಟ್ರಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಜಲಗಾಂವ್ ಜಿಲ್ಲೆಯ ಪಚೋರಾದಲ್ಲಿ ಕೆಲ ದಿನಗಳ ಹಿಂದೆ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿತ್ತು. ಇದನ್ನು ಸಂದೀಪ್ ಮಹಾಜನ್ ತಮ್ಮ ಸ್ಥಳೀಯ ಪತ್ರಿಕೆ ಮತ್ತು ಯೂಟ್ಯೂಬ್ ಚಾನೆಲ್ ನಲ್ಲಿ ವರದಿ ಮಾಡಿದ್ದರು. ಪ್ರಕರಣವನ್ನು ಮುಚ್ಚಿಹಾಕಲು ಸ್ಥಳೀಯ ಶಾಸಕ ಕಿಶೋರ್ ಪಾಟೀಲ್ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಶಾಸಕ ಕಿಶೋರ್ ಪಾಟೀಲ್, ಏಕನಾಥ್ ಶಿಂಧೆ ಬಣದ ಶಾಸಕರಾಗಿದ್ದು, ಇದೇ ದ್ವೇಷದ ಹಿನ್ನೆಲೆಯಲ್ಲಿ ಶಿಂಧೆ ಬೆಂಬಲಿಗರೆಂದು ಹೇಳಿಕೊಂಡು ಕೆಲವರು ಸಂದೀಪ್ ಮಹಾಜನ್ ವಿರುದ್ಧ ದಾಳಿ ನಡೆಸಿದ್ದಾರೆ. ಹಲ್ಲೆ ನಡೆದ ಹಿಂದಿನ ದಿನವಷ್ಟೇ ಕಿಶೋರ್ ಪಾಟೀಲ್ ಸ್ವತಃ ಪತ್ರಕರ್ತರಿಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.