ನವದೆಹಲಿ: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ರಾಹುಲ್ ಗಾಂಧಿ ಸಂಸದ ಸ್ಥಾನದ ಅನರ್ಹತೆಯಿಂದಲೂ ಪಾರಾಗಿದ್ದು, ಕೇರಳದ ವಯನಾಡು ಲೋಕಸಭಾ ಕ್ಷೇತ್ರ ಸಂಸದರಾಗಿ ಮುಂದುವರಿಯಲಿದ್ದಾರೆ.
ವಿಚಾರಣಾ ನ್ಯಾಯಾಲಯದ ಆದೇಶದ ಪರಿಣಾಮಗಳು ವ್ಯಾಪಕವಾಗಿವೆ. ರಾಹುಲ್ ಗಾಂಧಿ ಅವರು ಸಾರ್ವಜನಿಕ ಜೀವನದಲ್ಲಿ ಮುಂದುವರಿಯುವ ಹಕ್ಕು ಮಾತ್ರವಲ್ಲದೇ ಅವರನ್ನು ಆಯ್ಕೆ ಮಾಡಿರುವ ಮತದಾರರ ಮೇಲೂ ಪರಿಣಾಮ ಬೀರಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಕರಣ ಸಂಬಂಧ ಗುಜರಾತ್ ಹೈಕೋರ್ಟ್ ನೀಡಿದ್ದ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ. ರಾಹುಲ್ ಗಾಂಧಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.