ಈಗಾಗಲೇ ಡಿಸಿಎಂ ಎಲ್ಲಾ ಮಾಹಿತಿ ನೀಡಿದ್ದಾರೆ. ಫಲಾನುಭವಿಗಳಿಗೆ ಯೋಜನೆ ತಲುಪಲಿದೆ, ಬೆಳಗಾವಿಯಲ್ಲಿ ಪ್ರಮುಖ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಡಿಸಿ, ಸಿಇಓಗಳ ಜೊತೆ ಡಿಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ವಿಕಾಸಸೌಧದ ಕೊಠಡಿ ಸಂಖ್ಯೆ 122 ರಲ್ಲಿ ನಡೆದ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕೃಷ್ಣ ಭೈರೇಗೌಡ ಭಾಗಿಯಾಗಿದ್ದರು. ಈ ವೇಳೆ ಗೃಹಲಕ್ಷ್ಮಿ ಯೋಜನೆ ಅರ್ಜಿ ವಿಲೇವಾರಿ ಸಂಬಂಧ ಅಧಿಕಾರಿಗಳಿಂದ ಅಂಕಿ-ಅಂಶಗಳ ಸಮೇತ ಸಚಿವರು ಮಾಹಿತಿ ಪಡೆದುಕೊಂಡಿದ್ದಾರೆ.
ಡಿಸಿ, ಸಿಇಓಗಳ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಗೃಹಲಕ್ಷ್ಮಿ ಯೋಜನೆಯ ಪ್ರಾರಂಭಕ್ಕೆ ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡುತ್ತೇವೆ. ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಯೋಜನೆಗೆ ಚಾಲನೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಅಲ್ಲದೇ, ಎಲ್ಲಾ ಗ್ರಾಮ ಪಂಚಾಯ್ತಿ, ನಗರಸಭೆ, ಪುರಸಭೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆ ನಡೆಯಲಿದೆ. ಪಂಚಾಯ್ತಿಗೊಬ್ಬರು ನೋಡೆಲ್ ಆಫಿಸರ್ಗಳ ನೇಮಕ ಮಾಡಿದ್ದೇವೆ. ಪಕ್ಷಾತೀತವಾಗಿ ಕಾರ್ಯಕ್ರಮ ಆಯೋಜನೆ, ಎಲ್ಲರೂ ಭಾಗವಹಿಸಬೇಕು. ಎಲ್ಲರಿಗೂ ಅನುಕೂಲ ಆಗಲೆಂದು ಭಾನುವಾರ ಫಿಕ್ಸ್ ಮಾಡಿದ್ದೇವೆ. 1.5 ಕೋಟಿ ಗೃಹಿಣಿಯರು ನೋಂದಣಿ ಮಾಡಿಕೊಂಡಿದ್ದಾರೆ. ಯಾವಾಗ ಬೇಕಾದರೂ ನೋಂದಣಿಗೆ ಅವಕಾಶ ಇದೆ ಎಂದು ಡಿಕೆಶಿ ವಿವರಿಸಿದ್ದಾರೆ
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್ಗಳನ್ನು ಅಳಿಸಲಾಗುತ್ತದೆ.