ಆಸಕ್ತರು ಆನ್‌ಲೈನ್ (Online) ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
IAF Recruitment 2023: ಭಾರತೀಯ ವಾಯುಪಡೆ(Indian Air Force) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಗ್ನಿವೀರ್ ವಾಯು(Agniveervayu) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಮೊದಲು ಆಗಸ್ಟ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು (Last Date). ಬಳಿಕ ಆ ದಿನಾಂಕವನ್ನು ವಿಸ್ತರಿಸಲಾಗಿತ್ತು. ಆ ಪ್ರಕಾರ ಅಭ್ಯರ್ಥಿಗಳು ಆಗಸ್ಟ್ 20ರ ತನಕ ಅಪ್ಲೈ ಮಾಡಬಹುದಾಗಿತ್ತು. ಅದರಂತೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್‌ಲೈನ್ (Online) ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ವಾಯುಪಡೆ |
ಹುದ್ದೆ | ಅಗ್ನಿವೀರ್ವಾಯು |
ವಿದ್ಯಾರ್ಹತೆ | ಪಿಯುಸಿ, ಡಿಪ್ಲೊಮಾ |
ವೇತನ | ಮಾಸಿಕ ₹ 30,000-40,000 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ವಯೋಮಿತಿ | ಗರಿಷ್ಠ 21 ವರ್ಷ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಆಗಸ್ಟ್ 20, 2023 (ಇಂದು) |
ವಿದ್ಯಾರ್ಹತೆ:
ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 21 ವರ್ಷ ಮೀರಿರಬಾರದು. ಅಭ್ಯರ್ಥಿಗಳು ಜೂನ್ 27, 2003 & ಡಿಸೆಂಬರ್ 27, 2006 ರೊಳಗೆ ಜನಿಸಿರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 30,000-40,000
ಭಾರತದಲ್ಲಿ ಎಲ್ಲಿ ಬೇಕಾದರೂ
ದೈಹಿಕ ಸಾಮರ್ಥ್ಯ ಪರೀಕ್ಷೆ
ಹೊಂದಿಕೊಳ್ಳುವಿಕೆ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಆನ್‌ಲೈನ್ ಪರೀಕ್ಷೆ
ಇನ್ನೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ-IAF- ನೋಟಿಫಿಕೇಶನ್
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/07/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 20, 2023
ಆನ್‌ಲೈನ್ ಪರೀಕ್ಷೆ ನಡೆಯುವ ದಿನ: ಅಕ್ಟೋಬರ್ 13, 2023
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 011-25694209/25699606 ಗೆ ಸಂಪರ್ಕಿಸಿ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.