Job Vacancy: ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅಪ್ಲೈ ಮಾಡಿ- ಕೈ ತುಂಬಾ ಸಂಬಳ

Arun Kumar
0

ಇದೇ ಆಗಸ್ಟ್ 9ರಂದು ನೇರ ಸಂದರ್ಶನ (Direct Interview) ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಪಾಲ್ಗೊಳ್ಳಿ.

Bellary Taluk Office Recruitment 2023: ಬಳ್ಳಾರಿ ತಾಲೂಕು ಕಚೇರಿ (Bellary Taluk Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಡೇಟಾ ಎಂಟ್ರಿ ಆಪರೇಟರ್ (Data Entry Operator) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಇದೇ ಆಗಸ್ಟ್ 9ರಂದು ನೇರ ಸಂದರ್ಶನ (Direct Interview) ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಪಾಲ್ಗೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಳ್ಳಾರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


ಗಮನಿಸಿ: ಇದು ತಾತ್ಕಾಲಿಕ ಹುದ್ದೆ ಆಗಿರುತ್ತದೆ. ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಹೊರ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:
ಬಳ್ಳಾರಿ ತಾಲೂಕು ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಯಾವುದೇ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಇರಬೇಕು. ಕನ್ನಡ & ಇಂಗ್ಲಿಷ್ ಎರಡೂ ಭಾಷೆಗಳ ಟೈಪಿಂಗ್ ಬರಬೇಕು.


ಅನುಭವ:
ಬಳ್ಳಾರಿ ತಾಲೂಕು ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 1 ವರ್ಷ ಅನುಭವ ಹೊಂದಿರಬೇಕು.


ವೇತನ:
ನಿಗದಿಪಡಿಸಿಲ್ಲ.

ಸಂದರ್ಶನ ನಡೆಯುವ ಸ್ಥಳ:
ನೂತನ ಜಿಲ್ಲಾಡಳಿತ ಭವನ
ಬಳ್ಳಾರಿ


ಅಭ್ಯರ್ಥಿಗಳು ಸಂದರ್ಶನಕ್ಕೆ ಹೋಗುವಾಗ ತಮ್ಮ ವಿದ್ಯಾಭ್ಯಾಸದ ಮೂಲ ಅಂಕಪಟ್ಟಿಗಳು, ಪ್ರಮಾಣ ಪತ್ರ & ದೃಢೀಕೃತ ನಕಲು ಪ್ರತಿಯೊಂದಿಗೆ ಹಾಜರಾಗಬೇಕು. ಆಗಸ್ಟ್ 9ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಬಳಿಕ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.


ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08392-277415ಕ್ಕೆ ಸಂಪರ್ಕಿಸಬಹುದು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)