JOBS: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ಕ್ಲಾಸ್ ಪಾಸಾಗಿದ್ರೆ ಬೇಗ ಅಪ್ಲೈ ಮಾಡಿ- ಇವತ್ತೇ ಲಾಸ್ಟ್ ಡೇಟ್

Arun Kumar
0

 

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1714 ವಿವಿಧ ಹುದ್ದೆಗಳಿಗೆ ಈಗಲೇ ಅಪ್ಲೈ ಮಾಡಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು.

Karnataka Post Office Recruitment 2023: ಭಾರತೀಯ ಅಂಚೆ ಇಲಾಖೆ(Indian Post Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ ಒಟ್ಟು 1714 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳು ಖಾಲಿ ಇವೆ. ಭಾರತೀಯ ಅಂಚೆ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಕರ್ನಾಟಕದಲ್ಲಿ(Karnataka) ಖಾಲಿ ಇರುವ 1714 ಹುದ್ದೆಗಳಿಗೆ ಅರ್ಜಿ ಹಾಕಲು ಆಗಸ್ಟ್ 23, 2023 ಅಂದರೆ ಇವತ್ತೇ ಕೊನೆಯ ದಿನವಾಗಿದೆ. ಹೀಗಾಗಿ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ.


ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಿ. ಅಂಚೆ ಇಲಾಖೆಯಲ್ಲಿ(Post Office) ಜಾಬ್​ ಸಿಕ್ಕರೆ ಲೈಫ್​ ಸೆಟಲ್ಡ್​ ಎಂದೇ ಅರ್ಥ. ಹೀಗಾಗಿ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1714 ವಿವಿಧ ಹುದ್ದೆಗಳಿಗೆ ಈಗಲೇ ಅಪ್ಲೈ ಮಾಡಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತೀಯ ಅಂಚೆ ಇಲಾಖೆ
ಹುದ್ದೆಗ್ರಾಮೀಣ ಡಾಕ್​ ಸೇವಕ್
ಒಟ್ಟು ಹುದ್ದೆ1714
ವಿದ್ಯಾರ್ಹತೆ10ನೇ ತರಗತಿ
ವೇತನಮಾಸಿಕ ₹12,000-29,380
ಉದ್ಯೋಗದ ಸ್ಥಳಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಆಗಸ್ಟ್ 23, 2023(ಇಂದು)

ಯಾವ್ಯಾವ ಬ್ರಾಂಚ್​ನಲ್ಲಿ ಎಷ್ಟು ಹುದ್ದೆಗಳಿವೆ?


ಬಾಗಲಕೋಟೆ- 29
ಬಳ್ಳಾರಿ- 43
ಬೆಳಗಾವಿ- 42
ಬೆಂಗಳೂರು ಪೂರ್ವ- 11
ಬೆಂಗಳೂರು ದಕ್ಷಿಣ- 4
ಬೆಂಗಳೂರು ಪಶ್ಚಿಮ- 6
ಬೀದರ್- 49
ಚನ್ನಪಟ್ಟಣ- 66
ಚಿಕ್ಕಮಗಳೂರು- 63
ಚಿಕ್ಕೋಡಿ- 45
ಚಿತ್ರದುರ್ಗ- 51
ದಾವಣಗೆರೆ ಡಿವಿಶನಲ್ ಆಫೀಸ್- 47
ಧಾರವಾಡ- 36
ಗದಗ- 63
ಗೋಕಾಕ್​-13
ಹಾಸನ- 84
ಹಾವೇರಿ- 33
ಕಲಬುರಗಿ- 44
ಕಾರವಾರ- 53
ಕೊಡಗು- 44
ಕೋಲಾರ- 75
ಮಂಡ್ಯ- 78
ಮಂಗಳೂರು- 52
ಮೈಸೂರು - 43
ನಂಜನಗೂಡು- 41
ಪುತ್ತೂರು- 89
ರಾಯಚೂರು- 49
RMS HB- 44
RMS Q- 6
ಶಿವಮೊಗ್ಗ- 74
ಶಿರಸಿ- 48
ತುಮಕೂರು- 81
ಉಡುಪಿ- 110
ವಿಜಯಪುರ- 65
ಯಾದಗಿರಿ- 33


ಹುದ್ದೆಯ ಕುರಿತಾದ ಇನ್ನೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 23, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
PWD (OBC) ಅಭ್ಯರ್ಥಿಗಳು- 13 ವರ್ಷ
PWD (SC/ST) ಅಭ್ಯರ್ಥಿಗಳು- 15 ವರ್ಷ


ಅರ್ಜಿ ಶುಲ್ಕ:
ಮಹಿಳಾ/ SC/ST/PwD & ಟ್ರಾನ್ಸ್​ವುಮೆನ್ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು- 100 ರೂ.
ಪಾವತಿಸುವ ಬಗೆ- ಆನ್​ಲೈನ್


ಉದ್ಯೋಗದ ಸ್ಥಳ:
ಕರ್ನಾಟಕ

ವೇತನ:
ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್​ ಮಾಸ್ಟರ್)- ಮಾಸಿಕ ₹ 12,000-29,380
ಗ್ರಾಮೀಣ ಡಾಕ್ ಸೇವಕ್ (ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್​ ಮಾಸ್ಟರ್)- ಮಾಸಿಕ ₹ 10,000-24,470


ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ದಾಖಲಾತಿ ಪರಿಶೀಲನೆ
ಸಂದರ್ಶನ


ಅಧಿಕೃತ ನೋಟಿಫಿಕೇಶನ್ ಇಲ್ಲಿದೆ-Post Office Jobs- ನೋಟಿಫಿಕೇಶನ್


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/08/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 23, 2023 (ಇಂದು)


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)