KAPL Recruitment 2023: ಬೆಂಗಳೂರಿನಲ್ಲಿ ಸರ್ಕಾರಿ ಕೆಲಸ ಖಾಲಿ ಇದೆ- ಆಸಕ್ತರು ಇವತ್ತೇ ಅಪ್ಲೈ ಮಾಡಿ

Arun Kumar
0

 

ಅರ್ಹ ಅಭ್ಯರ್ಥಿಗಳು KAPLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಗಸ್ಟ್ 21, 2023 ಅಂದರೆ ಇವತ್ತೇ ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು.

KAPL Recruitment 2023: ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​(Karnataka Antibiotics and Pharmaceuticals Limited) ನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 6 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು KAPLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಗಸ್ಟ್ 21, 2023 ಅಂದರೆ ಇವತ್ತೇ ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್
ಹುದ್ದೆಟೆಕ್ನಿಷಿಯನ್
ಒಟ್ಟು ಹುದ್ದೆ6
ವೇತನಮಾಸಿಕ ₹ 29,500
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಆಗಸ್ಟ್ 21, 2023 (ಇಂದು)

ಹುದ್ದೆಯ ಮಾಹಿತಿ:
ಟೆಕ್ನಿಷಿಯನ್-II- 3
ಟೆಕ್ನಿಷಿಯನ್-IV- 3

ವಿದ್ಯಾರ್ಹತೆ:
ಟೆಕ್ನಿಷಿಯನ್-II- ಪ್ರಥಮ ದರ್ಜೆ ಬಾಯ್ಲರ್ ಅಟೆಂಡೆಂಟ್ ಸಾಮರ್ಥ್ಯ ಪ್ರಮಾಣಪತ್ರ ಪಡೆದಿರಬೇಕು.
ಟೆಕ್ನಿಷಿಯನ್-II-  ಎರಡನೇ ದರ್ಜೆಯ ಬಾಯ್ಲರ್ ಅಟೆಂಡೆಂಟ್ ಸಾಮರ್ಥ್ಯ ಪ್ರಮಾಣಪತ್ರ ಪಡೆದಿರಬೇಕು.


ವಯೋಮಿತಿ:
ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 21, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಟೆಕ್ನಿಷಿಯನ್-II- ಮಾಸಿಕ ₹ 29,500
ಟೆಕ್ನಿಷಿಯನ್-IV- ಮಾಸಿಕ ₹ 26,600


ಉದ್ಯೋಗದ ಸ್ಥಳ:
ಬೆಂಗಳೂರು


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಡೆಪ್ಯುಟಿ ಜನರಲ್ ಮ್ಯಾನೇಜರ್ [HRD]
ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್
KAPL ಹೌಸ್
ಪ್ಲಾಟ್ ನಂ 37
ARKA ದಿ ಬಿಸಿನೆಸ್ ಸೆಂಟರ್
ಪ್ಲಾಟ್ ನಂಬರ್. 37
ಸೈಟ್ ನಂಬರ್. 34/4
NTTF ಮುಖ್ಯ ರಸ್ತೆ
2 ನೇ ಹಂತ
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ
ಬೆಂಗಳೂರು - 560058


ಹುದ್ದೆಯ ಕುರಿತಾದ ನೋಟಿಫಿಕೇಶನ್​ಗಾಗಿ ಇಲ್ಲಿ ಕ್ಲಿಕ್ ಮಾಡಿ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/07/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 21, 2023 (ಇಂದು)


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)