Karnataka Jobs: ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ- ಅರ್ಜಿ ಹಾಕಲು ನಾಳೆಯೇ ಲಾಸ್ಟ್​ ಡೇಟ್

Arun Kumar
0

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 1,25,000 ಸಂಬಳ ಕೊಡಲಾಗುತ್ತದೆ.

KSFC Recruitment 2023: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (Karnataka State Financial Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಎಕ್ಸಿಕ್ಯೂಟಿವ್ ಡೈರೆಕ್ಟರ್  (Executive Director) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಕೆಲಸ ಬೇಕು ಎಂದು ಹಂಬಲಿಸುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಗಸ್ಟ್ 19, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಶೈಕ್ಷಣಿಕ ಅರ್ಹತೆ:
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CAIIB, CFA, ACS, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2023ಕ್ಕೆ ಕನಿಷ್ಠ 55 ವರ್ಷ ಮತ್ತು ಗರಿಷ್ಠ 63 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 1,25,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಅವರ ಕ್ವಾಲಿಫಿಕೇಶನ್, ಅನುಭವ, ವೈವಾ- ವೋಸ್ & ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/07/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 19, 2023 (ನಾಳೆ)

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ವ್ಯವಸ್ಥಾಪಕ ನಿರ್ದೇಶಕರು
ನಂ.1/1
ಕೆಎಸ್‌ಎಫ್‌ಸಿ ಭವನ
ಪ್ರಧಾನ ಕಚೇರಿ
ತಿಮ್ಮಯ್ಯ ರಸ್ತೆ
ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಹತ್ತಿರ
ಬೆಂಗಳೂರು-560052


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)