SWR Recruitment 2023: ರೈಲ್ವೆ ಡಿಪಾರ್ಟ್ಮೆಂಟ್ನಲ್ಲಿ (Railway Department) ಕೆಲಸ ಹುಡುಕುತ್ತಿದ್ದೀರಾ? ಇಲ್ಲಿದೆ ನೋಡಿ ಬಂಪರ್ ಆಫರ್. ನೈರುತ್ಯ ರೈಲ್ವೆ (South Western Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಭೂ ಸ್ವಾಧೀನ ಸಹಾಯಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನೈರುತ್ಯ ರೈಲ್ವೆ |
ಹುದ್ದೆಯ ಹೆಸರು | ಭೂ ಸ್ವಾಧೀನ ಸಹಾಯಕ |
ಒಟ್ಟು ಹುದ್ದೆಗಳು | 6 |
ಉದ್ಯೋಗದ ಸ್ಥಳ | ಕರ್ನಾಟಕ |
ವೇತನ | ಮಾಸಿಕ ₹ 27,650- 58,250 ರೂ. |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ | 01/08/2023 |
ಅರ್ಜಿ ಸಲ್ಲಿಸಲು ಕೊನೆಯ ದಿನ | ಆಗಸ್ಟ್ 21, 2023 |
ವಯೋಮಿತಿ:
ನೈರುತ್ಯ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2023ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಶಾರ್ಟ್ಲಿಸ್ಟಿಂಗ್
ವೈಯಕ್ತಿಕ ಸಂದರ್ಶನ
ವೇತನ:
ಮಾಸಿಕ ₹ 27,650- 58,250 ರೂ.
ಉದ್ಯೋಗದ ಸ್ಥಳ:
ಕರ್ನಾಟಕ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ recruitment.cnswr@gmail.com ಗೆ ಆಗಸ್ಟ್ 21ರೊಳಗೆ ಕಳುಹಿಸಬೇಕು.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.