ಮಂಗಳವಾರ ಅನೇಕ ಸಂಘಟನೆಗಳು ಬೆಂಗಳೂರು ಬಂದ್‌ಗೆ ಕರೆ ಕೊಟ್ಟಿವೆ. ಆದರೆ ಕರವೇ ಯಾವುದೇ ಬಂದ್‌ಗೆ ಬೆಂಬಲ ಕೊಡುತ್ತಿಲ್ಲ. ಆದರೆ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದರ ವಿರುದ್ಧದ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ.
ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುತ್ತಿರುವುದನ್ನ ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿರುವ ಬೆಂಗಳೂರು ಬಂದ್‌ಗೆ (Bengaluru Bandh) ಸುಮಾರು 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಆದರೆ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike) ಹೋರಾಟಕ್ಕೆ ಮಾತ್ರ ಬೆಂಬಲ ನೀಡುತ್ತಿರುವುದಾಗಿ ಹಾಗೂ ತಮ್ಮ ಸಂಘಟನೆ ಯಾವುದೇ ಬಂದ್‌ಗೆ ಬೆಂಬಲ ಕೊಡುತ್ತಿಲ್ಲ ಎಂದು ಹೇಳಿದೆ. ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣ ಗೌಡ ಮತ್ತು ಮತ್ತು ಪ್ರಧಾನ ಕಾರ್ಯದರ್ಶಿ ಸಣೀರಪ್ಪ ನೇತೃತ್ವದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಂಗಳವಾರ ಅನೇಕ ಸಂಘಟನೆಗಳು ಬೆಂಗಳೂರು ಬಂದ್‌ಗೆ ಕರೆ ಕೊಟ್ಟಿವೆ. ಆದರೆ ಕರವೇ ಯಾವುದೇ ಬಂದ್‌ಗೆ ಬೆಂಬಲ ಕೊಡುತ್ತಿಲ್ಲ. ಆದರೆ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದರ ವಿರುದ್ಧದ ನಮ್ಮ ಹೋರಾಟ ಮುಂದುವರೆಯುತ್ತದೆ. ಕಾವೇರಿ ಬಿಕ್ಕಟ್ಟಿನ ಹಿನ್ನೆಲೆ ಹಲವು ಸಂಘಟನೆಗಳು ಎರಡು ದಿನ ಬಂದ್ ಕರೆ ನೀಡಿವೆ. ನಾವು ಯಾವ ಬಂದ್ಗೂ ಬೆಂಬಲ ನೀಡುತ್ತಿಲ್ಲ ಎಂದು ಸಣೀರಪ್ಪ ತಿಳಿಸಿದ್ದಾರೆ.
ಕರವೇ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ಸಂಘಟನೆ ಹೊಂದಿದೆ. ಇದರಿಂದ ನಾವು ಜವಾಬ್ದಾರಿಯಿಂದ ನಿರ್ಧಾರ ತೆಗೆದುಕೊಳ್ಳುತ್ತೇವೆ. ಈಗಾಗಲೇ ನಡೆಸುತ್ತಿರುವ ಚಳುವಳಿಯನ್ನು ಮುಂದುವರೆಸುತ್ತೇವೆ. ನಾಳೆ ಸಿಎಂ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.