Anekal: ಬಸ್ ನಿಲ್ದಾಣದಲ್ಲಿ ಏಕಾಏಕಿ ನಡೆದ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಚೀರಾಡುತ್ತಿದ್ದ ಯುವತಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಅತ್ತಿಬೆಲೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆನೇಕಲ್: ಪ್ರೀತಿ (Love) ನಿರಾಕರಿಸಿದ ಯುವತಿಗೆ (Woman) ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರು (Bengaluru) ಹೊರವಲಯ ಆನೇಕಲ್ (Anekal) ತಾಲ್ಲೂಕಿನ ಅತ್ತಿಬೆಲೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಮೂಲದ ಶ್ರೀನಿವಾಸ (28) ಯುವತಿಗೆ ಚಾಕು ಹಾಕಿದ ದುಷ್ಕರ್ಮಿಯಾಗಿದ್ದು, ಆತನನ್ನು ಪೊಲೀಸರು (Police) ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ (Hospital) ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.
ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆರೋಪಿ
ಒಂದೇ ಊರಿನವರಾಗಿದ್ದ ಯುವತಿಗೆ ಬಹಳ ದಿನಗಳಿಂದ ಆರೋಪಿ ಶ್ರೀನಿವಾಸ ಪ್ರೀತಿಸುವಂತೆ ಪದೇ ಪದೇ ಪೀಡಿಸುತ್ತಿದ್ದನಂತೆ. ಆದರೆ ಯುವತಿ ಪ್ರೀತಿಸಲು ನಿರಾಕರಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಆರೋಪಿ ಬಸ್ ನಿಲ್ದಾಣದಲ್ಲೇ ಯುವತಿ ಕುತ್ತಿಗೆ ಭಾಗವನ್ನು ಚಾಕು ಸೀಳಿ ಕೊಲೆಗೆ ಯತ್ನಿಸಿದ್ದಾನೆ. ಬಳಿಕ ತಾನು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗಾಯಗೊಂಡಿರುವ ಯುವತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಇನ್ನು, ಬಸ್ ನಿಲ್ದಾಣದಲ್ಲಿ ಏಕಾಏಕಿ ನಡೆದ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಚೀರಾಡುತ್ತಿದ್ದ ಯುವತಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಅತ್ತಿಬೆಲೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಘಟನೆ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗಾಯಗೊಂಡಿರುವ ಯುವತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಇತ್ತ ಆರೋಪಿಯನ್ನು ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾನ್ಸ್‌ಟೇಬಲ್ ಮೇಲು ಆತ ದಾಳಿ ಮಾಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.