ಸೆಪ್ಟೆಂಬರ್ 4, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು (Last Date), ಆಸಕ್ತರು ಆಫ್ಲೈನ್ (Offline) ಮೂಲಕ ಅಪ್ಲೈ ಮಾಡಬೇಕು.
HAL Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಆಕ್ಯುಪೇಷನಲ್ ಥೆರಪಿ (Occupational Therapy) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 4, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು (Last Date), ಆಸಕ್ತರು ಆಫ್ಲೈನ್ (Offline) ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ hal-india.co.inಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ |
ಹುದ್ದೆ | ಆಕ್ಯುಪೇಷನಲ್ ಥೆರಪಿ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಬ್ಯಾಚುಲರ್ ಆಫ್ ಆಕ್ಯುಪೇಷನಲ್ ಥೆರಪಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಬೆಂಗಳೂರು |
ಸಂದರ್ಶನ ನಡೆಯುವ ದಿನ | ಸೆಪ್ಟೆಂಬರ್ 4, 2023 |
ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬ್ಯಾಚುಲರ್ ಆಫ್ ಆಕ್ಯುಪೇಷನಲ್ ಥೆರಪಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: SDA, FDA ಸೇರಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ KSOU ಯೂನಿವರ್ಸಿಟಿ
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2023ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ವ್ಯವಸ್ಥಾಪಕರು (HR)
ಕೈಗಾರಿಕಾ ಆರೋಗ್ಯ ಕೇಂದ್ರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರಂಜಂದಾಸ್ ರಸ್ತೆ
ಬೆಂಗಳೂರು-560017
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/08/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 4, 2023
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22323005/22328023 ಗೆ ಕರೆ ಮಾಡಿ ಅಥವಾ hr.medical@hal-india.co.in ಗೆ ಸಂಪರ್ಕಿಸಿ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.