Asian Games 2023: ಏಷ್ಯನ್ ಗೇಮ್ಸ್‌ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ ಕ್ರೀಡಾಪಟುಗಳ ವಿಜಯೋತ್ಸವ, 12 ಪದಕ ಗೆದ್ದ ಸಾಧಕರು

Arun Kumar
0

 

ರಿಲಯನ್ಸ್ ಫೌಂಡೇಶನ್ ಒಂದು ಲೋಕೋಪಕಾರಿ ಸಂಸ್ಥೆಯಾಗಿದ್ದು, ಇದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಭಾಗವಾಗಿದೆ. ಇದರ ಸಂಸ್ಥಾಪಕರು ಮತ್ತು ಅಧ್ಯಕ್ಷರು ನೀತಾ ಅಂಬಾನಿ ಆಗಿದ್ದಾರೆ.

ಏಷ್ಯನ್ ಗೇಮ್ಸ್‌ 2023ನಲ್ಲಿ (Asian Games 2023) ಭಾರತವು ಅತ್ಯುತ್ತಮ ಪ್ರದರ್ಶನವನ್ನು ನೀಡುವ ಮೂಲಕ ಪಂದ್ಯಾವಳಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿತು. ಈ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್‌ಗಳು ಒಟ್ಟು 107 ಪದಕಗಳನ್ನು ಗೆದ್ದಿದ್ದಾರೆ. ಇವುಗಳಲ್ಲಿ 28 ಚಿನ್ನ, 38 ಬೆಳ್ಳಿ ಮತ್ತು 41 ಕಂಚಿನ ಪದಕಗಳು ಸೇರಿವೆ. ರಿಲಯನ್ಸ್ ಫೌಂಡೇಶನ್ ಬೆಂಬಲಿತ ಕ್ರೀಡಾಪಟುಗಳು ಏಷ್ಯನ್ ಗೇಮ್ಸ್‌ನಲ್ಲಿ 12 ಪದಕಗಳನ್ನು ಗೆದ್ದು ದೇಶದ ಯಶಸ್ಸಿಗೆ ಗಣನೀಯ ಕೊಡುಗೆ ನೀಡಿದ್ದಾರೆ.


ಸಂಸತ ಹಂಚಿಕೊಂಡ ನೀತಾ ಅಂಬಾನಿ:


ಈ ಸಂದರ್ಭದಲ್ಲಿ, ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರು ಈ ಕಾಂಟಿನೆಂಟಲ್ ಕ್ರೀಡಾಕೂಟದಲ್ಲಿ ಭಾರತವು ಸಾಧಿಸಿದ ಅದ್ಭುತ ಯಶಸ್ಸಿಗೆ ಕ್ರೀಡಾಪಟುಗಳನ್ನು ಅಭಿನಂದಿಸಿದರು. ಏಷ್ಯನ್ ಗೇಮ್ಸ್‌ನಲ್ಲಿ ನಮ್ಮ ದೇಶವನ್ನು ಹೆಮ್ಮೆ ಪಡುವಂತೆ ಮಾಡಿದ್ದಕ್ಕಾಗಿ ಟೀಂ ಇಂಡಿಯಾಗೆ ಅಭಿನಂದನೆಗಳು ಎಂದು ಅವರು ಹೇಳಿದ್ದಾರೆ. 100ಕ್ಕೂ ಹೆಚ್ಚು ಪದಕಗಳ ಐತಿಹಾಸಿಕ ದಾಖಲೆ ಭಾರತದ ಯುವ ಶಕ್ತಿಯ ಉಜ್ವಲ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.


ರಿಲಯನ್ಸ್ ಫೌಂಡೇಶನ್ ಬೆಂಬಲಿತ ಅಥ್ಲೀಟ್‌ಗಳ ಸಾಧನೆ:


ನೀತಾ ಅಂಬಾನಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ ಕ್ರೀಡಾಪಟುಗಳ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ 12 ಪದಕಗಳನ್ನು ಗೆದ್ದಿರುವ ರಿಲಯನ್ಸ್ ಫೌಂಡೇಶನ್ ಅಥ್ಲೀಟ್‌ಗಳ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಅವರು ಹೇಳಿದರು. ಕಿಶೋರ್ ಜೆನಾ, ಜ್ಯೋತಿ ಯರಾಜಿ, ಪಾಲಕ್ ಗುಲಿಯಾ ಮತ್ತು ಇತರ ಎಲ್ಲ ಯುವ ಆಟಗಾರರು ತಮ್ಮ ಅತ್ಯುತ್ತಮ ಪ್ರದರ್ಶನಕ್ಕಾಗಿ ವಿಶೇಷ ಅಭಿನಂದನೆಗಳುವ ಎಂದಿದ್ದಾರೆ. ರಿಲಯನ್ಸ್ ಫೌಂಡೇಶನ್ ಮೂಲಕ, ನಮ್ಮ ಯುವ ಕ್ರೀಡಾಪಟುಗಳನ್ನು ಬೆಂಬಲಿಸಲು ಮತ್ತು ಕ್ರೀಡೆಗಳಲ್ಲಿ ಪ್ರತಿಭೆಯನ್ನು ಪೋಷಿಸಲು ಮತ್ತು ಅವರಿಗೆ ಸಹಾಯ ಮಾಡಲು ಮತ್ತು ಪ್ರೋತ್ಸಾಹಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)