Five State Election: 2 ದಿನಕ್ಕೆ ಮತದಾನ ದಿನಾಂಕವನ್ನು ಬದಲಿಸಿದ ಚುನಾವಣಾ ಆಯೋಗ! ಇದೇ ಕಾರಣ

Arun Kumar
0

 


ಚುನಾವಣಾ ಆಯೋಗ ಇತ್ತೀಚೆಗಷ್ಟೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಗ್ಗೆ ಮಾಹಿತಿ ಹಂಚಿಕೊಂಡಿತ್ತು. ತೆಲಂಗಾಣ, ಮಿಜೋರಾಂ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಿತ್ತು. ಆದರೆ 2 ದಿನದಲ್ಲಿ ಪ್ರಮುಖ ಬದಲಾವಣೆ ಮಾಡಿದೆ.

ಚುನಾವಣಾ ಆಯೋಗ ಇತ್ತೀಚೆಗಷ್ಟೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಗ್ಗೆ ಮಾಹಿತಿ ಹಂಚಿಕೊಂಡಿತ್ತು. ತೆಲಂಗಾಣ, ಮಿಜೋರಾಂ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಿತ್ತು.

ಆದರೆ ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತದಾನ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗವು ಇಂದು ಪರಿಷ್ಕರಿಸಿದೆ. ನವೆಂಬರ್ 23ರಂದು ನಡೆಯಬೇಕಿದ್ದ ಮತದಾನವನ್ನು ಎರಡು ದಿನ ಮುಂದೂಡಿ 25ಕ್ಕೆ ಮತದಾನ ನಡೆಯಲಿದೆ ಎಂದು ಘೋಷಿಸಿದೆ. ಆದರೆ, ಈ ಹಿಂದೆ ಬಿಡುಗಡೆ ಮಾಡಿದ ದಿನಾಂಕಗಳ ಪ್ರಕಾರ ಉಳಿದ 4 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಸಿಇಸಿ ಸ್ಪಷ್ಟಪಡಿಸಿದೆ.

ಅಕ್ಟೋಬರ್​ 9ರಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ಮಿಜೋರಾಂ ಹಾಗೂ ತೆಲಂಗಾಣ ಸೇರಿ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಮತದಾನ ಮತ್ತು ಫಲಿತಾಂಶದ ದಿನಾಂಕ ಘೋಷಣೆ ಮಾಡಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)