Karnataka Congress: ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತಾಡಿದರೆ ಹುಷಾರ್​​! ಸಚಿವರು, ಶಾಸಕರಿಗೆ ಸುರ್ಜೇವಾಲ ಖಡಕ್​ ವಾರ್ನಿಂಗ್

Arun Kumar
0

 


ಬೆಂಗಳೂರು: “ಪಕ್ಷದ ಸಂಘಟನೆ (Party organization), ಅಧಿಕಾರ (Power) ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ (Congress Party) ಯಾವುದೇ ನಾಯಕರು ಸಾರ್ವಜನಿಕವಾಗಿ (Public) ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ (Strict action) ಕೈಗೊಳ್ಳಲಾಗುವುದು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ (Randeep Singh Surjewala ) ಸುರ್ಜೆವಾಲ ಅವರು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಮುಂಬರುವ ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ, ನಿಗಮ-ಮಂಡಳಿ ನೇಮಕ ಹಾಗೂ ಪಕ್ಷದ ನಾಯಕರ ಹೇಳಿಕೆಗಳ ವಿಚಾರವಾಗಿ ಬುಧವಾರ ಸುದೀರ್ಘ ಚರ್ಚೆ ನಡೆಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)