ಸಿಲಿಕಾನ್ ಸಿಟಿಯನ್ನು ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಶಂಕಿತರ ತಲೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಹುಮಾನ ಘೋಷಿಸಿದೆ. ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ₹20 ಲಕ್ಷ ಬಹುಮಾನ ಸಿಗಲಿದೆ.
ಗ್ರಾಹಕನ ಸೋಗಿನಲ್ಲಿ ಬಂದು ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಇಟ್ಟಿದ್ದ ಆರೋಪಿ ಮುಸಾವಿರ್ ಹುಸೇನ್ ಶಾಜಿಬ್ ಮತ್ತು ಪ್ರಕರಣದಲ್ಲಿ ಪ್ರಮುಖ ಸಂಚುಕೋರನಾಗಿರುವ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಎಂಬ ಶಂಕಿತ ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ ಬಹುಮಾನ ಘೋಷಿಸಿದೆ. ಈ ಇಬ್ಬರು ಆರೋಪಿಗಳು ಈಗಾಗಲೇ 2020ರ ಭಯೋತ್ಪಾದನೆ ಪ್ರಕರಣದಲ್ಲಿ ಬೇಕಾದವರಾಗಿದ್ದಾರೆ.
ಇಬ್ಬರೂ ಶಂಕಿತರ ಬಗ್ಗೆ ಮಾಹಿತಿ ಹೊಂದಿರುವ ಯಾರೇ ಆದರೂ, info.blr.niagov.in ವಿಳಾಸಕ್ಕೆ ಇಮೇಲ್ ಅಥವಾ ಕರೆ ಮಾಡುವ ಮೂಲಕ ಏಜೆನ್ಸಿಯನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಹೇಳಿದೆ. ಈ ಆರೋಪಿಗಳ ಮಾಹಿತಿ ನೀಡಿದವರ ಗುರುತನ್ನು ಗೌಪ್ಯವಾಡುವುದಾಗಿ ಎನ್ಐಎ ಹೇಳಿದೆ.
ಎಕ್ಸ್ನಲ್ಲಿ ಎನ್ಐಎ ಪೋಸ್ಟ್
ಆರೋಪಿಯು ತನ್ನ ಗುರುತನ್ನು ಮರೆಮಾಚಲು ಶಜೀಬ್ ಮೊಹಮ್ಮದ್ ಜುನೆದ್ ಸೈಯದ್ ಎಂಬ ಹೆಸರು ಬಳಕೆ ಮಾಡುತ್ತಿದ್ದ ಎಂದು ಎನ್ಐಎ ಹೇಳಿದೆ. ಅಲ್ಲದೆ ತಾನು ಹಿಂದೂ ಎಂದು ಬಿಂಬಿಸಿಕೊಂಡಿದ್ದು, ಅದಕ್ಕೆ ತಕ್ಕಂತೆ ದಾಖಲೆಗಳನ್ನು ಹೊಂದಿದ್ದ. ವಿಘ್ನೇಶ್ ಎನ್ನುವ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಕೂಡ ಬಳಸುತ್ತಿದ್ದರು ಎಂದು ಸಂಸ್ಥೆ ಹೇಳಿದೆ.
ಎನ್ಐಎ ತಂಡವು ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ, ಮಾರ್ಚ್ 28 ರಂದು ಪ್ರಕರಣದ ಸಂಚುಕೋರರಲ್ಲಿ ಒಬ್ಬರಾದ ಮುಝಮ್ಮಿಲ್ ಶರೀಫ್ ಎನ್ನುವಾತನನ್ನು ಬಂಧಿಸಿದೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.