IPL 2024: ಟಿವಿಯಲ್ಲೇ ಮ್ಯಾಚ್‌ ನೋಡ್ತೀವಿ! RCB ಪಂದ್ಯದ ಟಿಕೆಟ್ ರೇಟ್ ನೋಡಿ ಬೆಚ್ಚಿಬಿದ್ದ ಫ್ಯಾನ್ಸ್!

Arun Kumar
0

IPL 2024: ಈಗಾಗಲೇ ಆರ್​ಸಿಬಿ ತವರು ಪಂದ್ಯದ ಅಂದರೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯಗಳ ಟಿಕೆಟ್​​ ಗಳನ್ನು ಪ್ಲೇಝಿಫ್​ ಎಂಬ ವೆಬ್​ಸೈಟ್​​ ನಲ್ಲಿ ಬಿಡುಗಡೆ ಮಾಡಲಾಗಿದೆ. ಆದರೆ ಟಿಕೆಟ್ ಬೆಲೆ ನೋಡಿ ಫ್ಯಾನ್ಸ್​ ಶಾಕ್​ ಆಗಿದ್ದಾರೆ.

ಐಪಿಎಲ್ ನ 17ನೇ ಸೀಸನ್ ಆರಂಭಕ್ಕೆ ಇನ್ನೇನು ಕೆಲ ದಿನಗಳು ಮಾತ್ರ ಬಾಕಿ ಉಳಿದಿದೆ. ಈ ಮೆಗಾ ಟೂರ್ನಿ ಇದೇ ಮಾರ್ಚ್ 22ರಿಂದ ಅದ್ಧೂರಿಯಾಗಿ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ಆರಂಭಿಸಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಮತ್ತು ಆರ್ಸಿಬಿ ತಂಡಗಳು ಸೆಣಸಾಟ ನಡೆಸಲಿದೆ.

ಆರ್‌ಸಿಬಿ ತಂಡ ತನ್ನ ಮೊದಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಚೆನ್ನೈನಲ್ಲಿ ಆಡಲಿದೆ. ಅಲ್ಲದೇ ಕಳೆದ ಬಾರಿಯಂತೆ ಆರ್ಸಿಬಿ ತಂಡ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಹ ತವರು ಪಂದ್ಯಗಳನ್ನು ಆಡಲಿದೆ. ಈ ಪಂದ್ಯದ ಎಲ್ಲಾ ಟಿಕೆಟ್ಗಳನ್ನು ಆರ್ಸಿಬಿ ಅಧಿಕೃತ ವೆಬ್ಸೈಟ್ ಮತ್ತು ಬುಕ್ ಮೈ ಶೋ ಮೂಲಕ ನೀವು ಖರೀದಿಸಬಹುದು.

ಈಗಾಗಲೇ ಆರ್ಸಿಬಿ ತವರು ಪಂದ್ಯದ ಅಂದರೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯಗಳ ಟಿಕೆಟ್ ಗಳನ್ನು ಪ್ಲೇಝಿಫ್ ಎಂಬ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಆದರೆ ಈಗಾಗಲೇ ಬಿಡುಗಡೆಯಾದ ಟಿಕೆಟ್ ಬೆಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿರುವ ಆರ್ಸಿಬಿ ಪಂದ್ಯದ ಟಿಕೆಟ್ ಬೆಲೆ ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)