ರಾಜ್ಯದಲ್ಲಿ ಮುಂದಿನ 1 ವಾರ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆಯಾಗಲಿದೆ?

Arun Kumar
0

ಸದ್ಯ ರಾಜ್ಯದ ಕೆಲವು ಭಾಗದಲ್ಲಿ ವರುಣನ ದರ್ಶನವಾಗಿದೆ. ಮಲೆನಾಡು, ಕರಾವಳಿ, ಸೇರಿ ಪಶ್ಚಿಮ ಘಟ್ಟ ಸಾಲಿನ ಕೆಲವು ಭಾಗದಲ್ಲಿ ಮಳೆಯಾಗಿದೆ. ಇನ್ನು ಬೆಂಗಳೂರು, ಹಳೆ ಮೈಸೂರು ಭಾಗದಲ್ಲಿ ಸಣ್ಣದಾಗಿ ಮಳೆಯಾಗಿದೆ. ಇದು ಬಿಟ್ಟರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಪ್ರಮಾಣ ಕಡಿಮೆಯಾಗಿದೆ.

ಕೆಲವು ಕಡೆ ಮಳೆ ಬಂದರೂ ಬೇಸಿಗೆಯ ಸೆಖೆ ಪ್ರಖರವಾಗಿದ್ದು, ಮತ್ತಷ್ಟು ಉರಿ ಬಿಸಿಲು ಕಾಡುತ್ತಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದರೂ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಿಲ್ಲ. ಸುಮಾರು 30ರಿಂದ 34 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಇತ್ತ ರಾಜ್ಯದಲ್ಲಿ ಒಣಹವೆ ಮುಂದುವರೆಯುವ ಲಕ್ಷಣ ಸಹ ಕಂಡುಬರುತ್ತಿದೆ.

ಇನ್ನು ಮುಂದಿನ 7 ದಿನಗಳ ಕಾಲ ರಾಜ್ಯದ ಹವಾಮಾನ ಯಾವ ರೀತಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಮುಂದಿನ ಒಂದು ವಾರದಲ್ಲಿ ರಾಜ್ಯದ ಕೆಲ ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 23ರಂದು ಮಂಗಳವಾರ ಬೀದರ್, ಕಲಬುರಗಿ, ಬೆಳಗಾವಿ, ಬಾಗಲಕೋಟೆಯ ಜಿಲ್ಲೆಯಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಮಾಹಿತಿ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)