ಮುಂಬೈ, ಏಪ್ರಿಲ್ 22: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ (ಆರ್ಐಎಲ್) ಅಂಗಸಂಸ್ಥೆ ರಿಲಯನ್ಸ್ ಜಿಯೊ ಇನ್ಫೊಕಾಮ್ ಲಿಮಿಟೆಡ್ನ ಲಾಭವು 2023-24ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಶೇಕಡ 13.16ರಷ್ಟು ಹೆಚ್ಚಳವಾಗಿದೆ.
ಕಂಪನಿಯು 2022-23ನೇ ಹಣಕಾಸು ವರ್ಷದ ಮಾರ್ಚ್ 31ಕ್ಕೆ ಕೊನೆಗೊಂಡ ಮೂರು ತಿಂಗಳ ಅವಧಿಯಲ್ಲಿ ₹ 4,716 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ 2023-24ನೇ ಹಣಕಾಸು ವರ್ಷದ ಮಾರ್ಚ್ 31ಕ್ಕೆ ಕೊನೆಗೊಂಡ ಮೂರು ತಿಂಗಳ ಅವಧಿಯಲ್ಲಿ ನಿವ್ವಳ ಲಾಭ ಶೇಕಡ 13.16ರಷ್ಟು ಹೆಚ್ಚಾಗಿ ₹ 5,337 ಕೋಟಿಗೆ ಏರಿಕೆ ಆಗಿದೆ.
2023-24ನೇ ಹಣಕಾಸು ವರ್ಷದಲ್ಲಿ ಕಂಪನಿಯ ನಿವ್ವಳ ಲಾಭ ಶೇ 12.4ರಷ್ಟು ಹೆಚ್ಚಾಗಿ ₹ 20,607 ಕೋಟಿಗೆ ತಲುಪಿದೆ. 2022-23ನೇ ಹಣಕಾಸು ವರ್ಷದಲ್ಲಿ ನಿವ್ವಳ ಲಾಭ ₹ 18,299 ಕೋಟಿಯಷ್ಟು ಇತ್ತು.
ಕಂಪನಿಯ ವರಮಾನ 2022-23ನೇ ಹಣಕಾಸು ವರ್ಷದಲ್ಲಿ ₹ 91,373 ಕೋಟಿ ಇತ್ತು. ಇದಕ್ಕೆ ಹೋಲಿಸಿದರೆ 2023-24ನೇ ಹಣಕಾಸು ವರ್ಷದಲ್ಲಿ ಶೇ 10ರಷ್ಟು ಹೆಚ್ಚಾಗಿ ₹ 1,00,891 ಕೋಟಿಗೆ ಏರಿಕೆ ಕಂಡಿದೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.