ಬಿಜೆಪಿಯ ₹2 ಕೋಟಿ ಹಣ ವಶಪಡಿಸಿಕೊಂಡ ನಾಲ್ಕು ಗಂಟೆಯಲ್ಲೇ ಕ್ಲೀನ್ ಚಿಟ್‌: ತನಿಖೆಗೆ ಕೃಷ್ಣಬೈರೇಗೌಡ ಆಗ್ರಹ

Arun Kumar
0

ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಂಡು ಇಡೀ ವ್ಯವಸ್ಥೆಯನ್ನೇ ಅವಮಾನಿಸುವ ರೀತಿ ಚುನಾವಣೆ ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಈ ಗೋಲ್ಮಾಲ್ ಪ್ರಕರಣವನ್ನು ಚುನಾವಣಾ ಅಧಿಕಾರಿಗಳು ನ್ಯಾಯಯುತ ತನಿಖೆ ನಡೆಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ರೂ. 2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದರು. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಅಧಿಕಾರಿಗಳು ಸೀಜ್ ಮಾಡಲಾದ ಹಣಕ್ಕೆ ಕೇವಲ ನಾಲ್ಕು ಗಂಟೆಯ ಅವಧಿಯಲ್ಲಿ ಕ್ಲೀನ್ ಚಿಟ್ ನೀಡಿ, ಹಣವನ್ನೂ ಬಿಜೆಪಿ ಗೆ ಹಿಂತಿರುಗಿಸಿದೆ. ಇದು ಹೇಗೆ ಸಾಧ್ಯವಾಯಿತು? ಎಂದು ಪ್ರಶ್ನೆ ಮಾಡಿದ್ದಾರೆ.

ಸಿಕ್ಕಿಬಿದ್ದ ಹಣಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಿರುವ ಬಿಜೆಪಿ ಮಾರ್ಚ್ 27 ರಂದೇ ₹5 ಕೋಟಿ ಹಣವನ್ನು ಕೆನೆರಾ ಬ್ಯಾಂಕ್ನಿಂದ ವಿತ್ಡ್ರಾ ಮಾಡಿ ಇಟ್ಟುಕೊಂಡಿರುವುದಾಗಿ ತಿಳಿಸಿದೆ. ಅಲ್ಲದೆ, ಈ ಹಣವನ್ನು ಚುನಾವಣಾ ಖರ್ಚಿಗಾಗಿ ಮೈಸೂರು, ಚಾಮರಾಜನಗರ ಹಾಗೂ ಮಂಗಳೂರಿಗೆ ಕಳುಹಿಸುತ್ತಿರುವುದಾಗಿ ಮಾಹಿತಿ ನೀಡಿದೆ. ಆದರೆ, ಈ ದಾಖಲೆಗಳು ಎಷ್ಟರ ಮಟ್ಟಿಗೆ ಸರಿಯಾಗಿವೆ? ನೀತಿ ಸಂಹಿತೆ ನಿರ್ದಿಷ್ಟಗೊಳಿಸಿರುವ ಶೇ.90ರಷ್ಟು ಹಣವನ್ನು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಖರ್ಚು ಮಾಡಿದ್ದು, ಈ ಬಗ್ಗೆ ಅಧಿಕಾರಿಗಳು ಕನಿಷ್ಟ ತನಿಖೆ ನಡೆಸದೆ ಹೋದದ್ದು ವಿಪರ್ಯಾಸ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)