ನವದೆಹಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಜೈಲಿನಲ್ಲಿ ಅಸ್ವಸ್ಥರಾಗಿದ್ದು, ಅವರ ಆರೋಗ್ಯದ ಬಗ್ಗೆ ಜೈಲಿನಲ್ಲಿರುವ ವೈದ್ಯರು ಸರಿಯಾಗಿ ಕಾಳಜಿ ವಹಿಸಿಲ್ಲ ಎಂದು ಆಮ್ ಆದ್ಮಿ ಪಾರ್ಟಿ(AAP) ಆರೋಪಿಸಿದೆ.
ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದ್ದು, ಅಂದಿನಿಂದ 4.5 ಕೆಜಿ ತೂಕವನ್ನು ಅವರು ಕಳೆದುಕೊಂಡಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಹೇಳಿದೆ.
ಏಪ್ರಿಲ್ 15 ರವರೆಗೆ ಅರವಿಂದ ಕೇಜ್ರಿವಾಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಒಪ್ಪಿಸಿದೆ. ಸದ್ಯ ಅವರು ತಿಹಾರ್ ಜೈಲ್ ನಲ್ಲಿದ್ದಾರೆ.
ತಿಹಾರ್ ಜೈಲಿನ ಜೈಲು ಸಂಖ್ಯೆ 2 ರಲ್ಲಿ 14X8 ಅಡಿ ಸೆಲ್ ನಲ್ಲಿ ಕೇಜ್ರಿವಾಲ್ ಅವರನ್ನು ಇರಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು ಏರುಪೇರಾಗುತ್ತಿದೆ ಮತ್ತು ಒಂದು ಹಂತದಲ್ಲಿ 50 ಕ್ಕಿಂತ ಕಡಿಮೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಮುಖ್ಯಮಂತ್ರಿಗಳಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ಮನೆಯಲ್ಲಿಯೇ ಅಡುಗೆ ಮಾಡಲಾಗುತ್ತಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಗಾಗಿ ಅವರ ಸೆಲ್ ಬಳಿ ತ್ವರಿತ ಪ್ರತಿಕ್ರಿಯೆ ತಂಡವನ್ನು ನಿಯೋಜಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ.
ಎಎಪಿ ನಾಯಕ ಕೇಜ್ರಿವಾಲ್ ನಿನ್ನೆ ವಿಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ಪತ್ನಿ ಸುನೀತಾ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಅವರ ವಕೀಲರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.