ಬೆಂಗಳೂರು, ಏಪ್ರಿಲ್ 10: ಒಕ್ಕಲಿಗರು ದಡ್ಡರಲ್ಲ, ಒಕ್ಕಲಿಗ ಸ್ವಾಮೀಜಿಗಳು ದಡ್ಡರಲ್ಲ ಎಂದು ಬಿಜೆಪಿ-ಜೆಡಿಎಸ್ ಒಕ್ಕಲಿಗ ಅಸ್ತ್ರಕ್ಕೆ ಡಿಕೆ ಶಿವಕುಮಾರ್ ಟಕ್ಕರ್ ಕೊಟ್ಟಿದ್ದಾರೆ. ಎನ್ಡಿಎ ಅಭ್ಯರ್ಥಿಗಳು ಒಕ್ಕಲಿಗ ಸ್ವಾಮೀಜಿಯನ್ನು ಭೇಟಿಯಾಗಿದ್ದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.
ಒಕ್ಕಲಿಗರ ಸ್ವಾಮೀಜಿಗಳನ್ನು ಭೇಟಿ ಮಾಡಿದರೆ ಸಮುದಾಯದ ಮತಗಳು ವಿಭಜನೆ ಆಗುತ್ತವೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಒಕ್ಕಲಿಗರು ಮತ್ತು ಸ್ವಾಮೀಜಿಗಳು ದಡ್ಡರಲ್ಲ. ಸ್ವಾಮೀಜಿಗಳ ಬಳಿ ಬರುವವರಿಗೆ ವಿಭೂತಿ, ಹೂವಿನ ಹಾರ ಹಾಕಿ ಕಳಿಸುತ್ತಾರೆ. ಅವರು ನಮ್ಮ ಪರ, ಅವರ ಪರ ಇಬ್ಬರ ಪರವೂ ಮಾಡುವುದಿಲ್ಲ. ಸ್ವಾಮೀಜಿಗಳು ಬುದ್ಧಿವಂತರು ರಾಜಕೀಯದಲ್ಲಿ ಅವರು ಹಸ್ತಕ್ಷೇಪ ಮಾಡುವುದಿಲ್ಲ. ಜನತಾದಳದವರು ಮಠವನ್ನು ಇಬ್ಭಾಗ ಮಾಡಿರುವ ಬಗ್ಗೆ ಸ್ವಾಮೀಜಿಗಳಿಗೆ ಅರಿವಿದೆ.
ನಮ್ಮ ಜನ ಕೂಡ ಇದನ್ನು ಗಮನಿಸುತ್ತಾರೆ. ಮೈತ್ರಿ ಸರ್ಕಾರ ಪತನವಾದ ಬಳಿಕ ನಮ್ಮ ಸಮಾಜದ ಸಿಎಂ ಅವರನ್ನು ಇಳಿಸಿ ಬಿಟ್ಟಿರಲ್ಲ ಎಂದು ಸ್ವಾಮೀಜಿಗಳು ಬಿಜೆಪಿಯರನ್ನು ಪ್ರಶ್ನಿಸಬಹುದಿತ್ತಲ್ಲವೇ? ಇದನ್ನು ಕೇಳುವ ಶಕ್ತಿ ಸ್ವಾಮೀಜಿಗಳಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ. ಒಕ್ಕಲಿಗ ಮುಖ್ಯಮಂತ್ರಿಯನ್ನು ಕೆಳಗಿಳಿಸಿದವರನ್ನೇ ಇಂದು ಸ್ವಾಮೀಜಿಯವರ ಬಳಿ ಕರೆದುಕೊಂಡು ಹೋಗಿ ಆಶೀರ್ವಾದ ಪಡೆಯುತ್ತಿದ್ದಾರಲ್ಲವೇ? ಎಂದು ಪ್ರಶ್ನಿಸಿದರು.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.