ಬೆಂಗಳೂರು, ಏಪ್ರಿಲ್ 27: ಕೇಂದ್ರ ಸರ್ಕಾರದಿಂದ ಬರಗಾಲ ಪರಿಹಾರ ಹಣ ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವೇ ಅನುದಾನ ಬಿಡುಗಡೆಗೆ ಅನುವು ಕೊಟ್ಟಿದೆ. ಹೀಗಾಗಿ ಅಧಿಕಾರಿಗಳೇ ಹಣ ನೀಡಬಹುದು ಎಂದು ಕಾಂಗ್ರೆಸ್ ಶಾಸಕರೊಬ್ಬರು ತಿಳಿಸಿದ್ದಾರೆ.
ಕರ್ನಾಟಕ ಬರ ಪರಿಹಾರ ನೀಡುವಂತೆ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಕಾಂಗ್ರೆಸ್ ಮನವಿ ಮೇರೆಗೆ ಈಗ ರೂ.3454 ಕೋಟಿ ಕೊಟ್ಟಿದ್ದಾರೆ ಎಂದು ಧಾರವಾಡದಲ್ಲಿ ಕಾಂಗ್ರೆಸ್ ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದ್ದಾರೆ.
ಕಾಂಗ್ರೆಸ್ 18,172 ಕೋಟಿ ರೂ ಮನವಿ
ಬರಗಾಲ ಬಿದ್ದ ತಕ್ಷಣ ಕೇಂದ್ರ ಸರ್ಕಾರ ರಾಜ್ಯಗಳಿಗೆ ಪರಿಹಾರ ನೀಡುವುದು ರೂಢಿ. ಕೇಂದ್ರ ಬರ ಅಧ್ಯಯನ ತಂಡ ಬಂದು ಹೋದ ತಕ್ಷಣ ಪರಿಹಾರ ಬರಬೇಕಿತ್ತು. ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ನಾವು 18,172 ಕೋಟಿ ರೂಪಾಯಿ ನೀಡುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ನ ಮನವಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮೂರೇ ದಿನದಲ್ಲಿ ರಿಲೀಸ್ ಮಾಡುವುದಾಗಿ ಭರವಸೆ ಕೊಟ್ಟರು ಆದರೆ ಬರಲಿಲ್ಲ. ಸದ್ಯ ನಾವು ಕೇಳಿದ್ದರ ಪೈಕಿ 3,454 ರೂಪಾಯಿ ಬಿಡುಗಡೆ ಮಾಡಿದ್ದಾರೆ. ಉಳಿದ ಪರಿಹಾರವನ್ನೂ ನೀಡಬೇಕು. ಈಗ ಕೊಟ್ಟಿರುವ ಪರಿಹಾರ ಹಣ ಸಾಲುವುದಿಲ್ಲ ಎಂದು ತಿಳಿಸಿದರು.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.