ಭಾರತದ ಮಸಾಲೆಗಳಿಗೆ ಹಾಂಗ್‌ಕಾಂಗ್, ಸಿಂಗಾಪುರ ನಿಷೇಧ: ದೇಶದ ಎಲ್ಲಾ ಮಸಾಲೆ ಬ್ರಾಂಡ್ ಪರೀಕ್ಷೆಗೆ ಕೇಂದ್ರ ನಿರ್ಧಾರ

Arun Kumar
0

ಭಾರತದ ಎರಡು ಜನಪ್ರಿಯ ಬ್ರಾಂಡ್ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳಿಗೆ ಹಾಂಕಾಂಗ್ ಮತ್ತು ಸಿಂಗಾಪುರ ನಿಷೇಧ ಹೇರಿದೆ. ಎರಡೂ ಬ್ರಾಂಡ್ಗಳ ಉತ್ಪನ್ನಗಳಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶಗಳಿವೆ ಎನ್ನುವ ಆರೋಪದ ಮೇಲೆ ನಿಷೇಧ ಹೇರಲಾಗಿದೆ.

ಸಿಂಗಾಪುರ ಮತ್ತು ಹಾಂಕಾಂಗ್ನಲ್ಲಿ ಮಸಾಲೆ ಉತ್ಪನ್ನಗಳಿಗೆ ನಿಷೇಧ ಹೇರಿದ ಬಳಿಕ ಎಚ್ಚೆತ್ತ ಭಾರತ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ದೇಶದ ಎಲ್ಲಾ ಉತ್ಪಾದನಾ ಘಟಕಗಳಿಂದ ಮಸಾಲೆಗಳ ಮಾದರಿ ಸಂಗ್ರಹಿಸಿ ಪರೀಕ್ಷೆ ಮಾಡಲು ಆಹಾರ ಆಯುಕ್ತರಿಗೆ ಕೇಂದ್ರ ಸರ್ಕಾರ ಆದೇಶ ನೀಡಿದೆ ಎಂದು ಮೂಲಗಳು ತಿಳಿಸಿವೆ.

ದೇಶದ ಎಲ್ಲಾ ಆಹಾರ ಆಯುಕ್ತರಿಗೆ ಸೂಚನೆ ನೀಡಲಾಗಿತ್ತು, ಮಸಾಲೆಗಳ ಮಾದರಿಗಳನ್ನು ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಮೂರ್ನಾಲ್ಕು ದಿನಗಳಲ್ಲಿ, ದೇಶದ ಎಲ್ಲಾ ಮಸಾಲೆ ತಯಾರಿಕಾ ಘಟಕಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗುವುದು ಎಂದು ಸರ್ಕಾರದ ಉನ್ನತ ಮೂಲಗಳು ಹೇಳಿವೆ.

ಎಂಡಿಹೆಚ್ ಮತ್ತು ಎವರೆಸ್ಟ್ ಮಾತ್ರವಲ್ಲ, ಎಲ್ಲಾ ಮಸಾಲೆ ತಯಾರಿಕಾ ಕಂಪನಿಗಳಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗುವುದು. ಸುಮಾರು 20 ದಿನಗಳಲ್ಲಿ ಪ್ರಯೋಗಾಲಯದಿಂದ ವರದಿ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)