ಜನರ ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸಿರುವುದಕ್ಕಾಗಿ ಸುಪ್ರೀಂ ಕೋರ್ಟ್ ನ ಕೆಂಗಣ್ಣಿಗೆ ಗುರಿಯಾಗಿದ್ದ ಪತಂಜಲಿ ಆಯುರ್ವೇದ ಸಂಸ್ಥೆಯ ಸಂಸ್ಥಾಪಕರಾಗಿರುವ ಯೋಗ ಗುರು ಬಾಬಾ ರಾಮದೇವ್ ಅವರು ನಿಶ್ಯರ್ಥ ಕ್ಷಮೆ ಯಾಚಿಸಿದ್ದಾರೆ. ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಿ ಅವರು ಈ ಕ್ಷಮೆ ಯಾಚಿಸಿದ್ದಾರೆ.
ರಾಮ್ ದೇವ್ ಹಾಗೂ ಪತಂಜಲಿಯ ಆಡಳಿತ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಖುದ್ದಾಗಿ ಹಾಜರಾಗುವಂತೆ ಕಳೆದ ವಿಚಾರಣೆಯ ವೇಳೆ ಸೂಚಿಸಿದ್ದ ಸುಪ್ರೀಂ ಕೋರ್ಟ್
ಅದೇ ಸಮಯ ಸಂಸ್ಥೆಯನ್ನು ತೀವ್ರವಾಗಿ ತರಾಟೆಗೂ ತೆಗೆದುಕೊಂಡಿತ್ತು. ಇದೆ ವೇಳೆ ಕ್ರಮಕ್ಕೆ ಸಿದ್ದರಾಗಿ ಎಂದು ಇಂದಿನ ವಿಚಾರಣೆಯ ವೇಳೆ ಬಾಬಾ ರಾಮ್ ದೇವ್ ಅವರಿಗೆ ಸುಪ್ರೀಂಕೋರ್ಟ್ ಕಟು ಎಚ್ಚರಿಕೆ ನೀಡಿದೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.