ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಭಾರತದ ಮೊದಲ ಪ್ರಧಾನ ಮಂತ್ರಿ ಎಂದು ಹೇಳಿಕೆ ನೀಡಿದ್ದ ಕಂಗನಾ ರಣಾವತ್ ವಿರುದ್ಧ ನೇತಾಜಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಇತ್ತೀಚೆಗೆ ನೇತಾಜಿ ಅವರು ಭಾರತದ ಮೊದಲ ಪ್ರಧಾನಿ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಅವರ ಹೇಳಿಕೆಯನ್ನು ಕಾಂಗ್ರೆಸ್ ಸೇರಿದಂತೆ ವಿವಿಧ ಮುಖಂಡರು ಖಂಡಿಸಿದ್ದರು.
ಈಗ ಸ್ವತಃ, ನೇತಾಜಿ ಅವರ ಕುಟುಂಬಸ್ಥರೇ ಕಂಗನಾ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಸುಭಾಸ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಎಕ್ಸ್ನಲ್ಲಿ ಲೇಖನ ಹಂಚಿಕೊಂಡಿದ್ದು, "ಯಾರೂ ತಮ್ಮ ರಾಜಕೀಯ ಮಹತ್ವಾಕಾಂಕ್ಷೆಗಾಗಿ ಇತಿಹಾಸವನ್ನು ತಿರುಚಬಾರದು" ಎಂದಿದ್ದಾರೆ.
ಎಕ್ಸ್ ಪೋಸ್ಟ್ನಲ್ಲಿ "ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ರಾಜಕೀಯ ಚಿಂತಕ, ಸೈನಿಕ, ರಾಜನೀತಿಜ್ಞ, ದೂರದೃಷ್ಟಿ ಮತ್ತು ಅವಿಭಜಿತ ಭಾರತದ 1 ನೇ ಪ್ರಧಾನಿ. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಲು ಭಾರತೀಯರಾಗಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿದ ಏಕೈಕ ನಾಯಕ. ಅವರ ಆದರ್ಶಗಳನ್ನು ಅನುಸರಿಸುವುದು ಅವರಿಗೆ ನೀಡುವ ನಿಜವಾದ ಗೌರವವಾಗಿದೆ" ಎಂದು ಚಂದ್ರಕುಮಾರ್ ಬೋಸ್ ಹೇಳಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.