ಕೋಲಾರ, ಏಪ್ರಿಲ್ 08: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಮೈಸೂರಿನ ಚುನಾವಣಾ ಪ್ರಚಾರದಲ್ಲಿ ಮುಂದಿನ ವಿಧಾನಸಭೆಗೆ ಚುನಾವಣೆ ನಿಲ್ಲಲ್ಲ. ನಾನು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯಲಿದ್ದೇನೆ ಎಂದಿದ್ದರು. ಇದರ ಬೆನ್ನಲ್ಲೆ ಕಾಂಗ್ರೆಸ್ನ ಮತ್ತೊಬ್ಬ ಹಿರಿಯ ನಾಯಕರೊಬ್ಬರ, ರಾಜಕಾರಣ ಕಲುಷಿತಗೊಂಡಿದೆ. ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗಲಿದ್ದೇನೆ ಎಂದು ಘೋಷಿಸಿದರು.
ರಾಜ್ಯ ರಾಜಕೀಯ ವ್ಯವಸ್ಥೆಯು ಕಲುಷಿತಗೊಂಡಿದೆ. ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಅವರು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಭಾನುವಾರ ತಮ್ಮ ನಿರ್ಧಾರ ಪ್ರಕಟಿಸಿದರು.
ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ (Speaker Ramesh Kumar) ಅವರು ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ನಿಲ್ಲುವುದಿಲ್ಲ. ನನಗೆ ಮತ ನೀಡಿ ಎಂದು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ತಿಳಿಸಿದರು.
ಕಾರ್ಯಕರ್ತರ ಸಭೆಯಲ್ಲಿ ಘೋಷಣೆ
ಭಾನುವಾರ ಸ್ವಗ್ರಾಮ ಶ್ರೀನಿವಾಸಪುರ ತಾಲೂಕು ಅಡ್ಡಗಲ್ ನಲ್ಲಿ ಕೋಲಾರ ಅಭ್ಯರ್ಥಿ ಕೆವಿ ಗೌತಮ್ ಪರವಾಗಿ ಅವರ ನಿವಾಸದಲ್ಲಿ ಕರೆಯಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಚುನಾವಣಾ ರಾಜಕೀಯ ನಿವೃತ್ತಿ ಕುರಿತು ಅವರು ಮಾತನಾಡಿದರು. ತಮಗೆ ಮೋಸ ಆಗಿದೆ ಎಂದು ಹಳೆಯ ಸೋಲನ್ನು ಅವರು ಸ್ಮರಿಸಿ ಬೇಸರ ವ್ಯಕ್ತಪಡಿಸಿದರು.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.