- ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ನಡುವೆ ದಟ್ಟ ಕಾನನದಲ್ಲಿ ಇರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಗೋಪಾಲಸ್ವಾಮಿ ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ನೆರವೇರಿದೆ. ಅದರ ಫೋಟೊಸ್ ಇಲ್ಲಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿಂದು (ಏಪ್ರಿಲ್ 4ರಂದು) ಶ್ರೀ ಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು.
ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವದಲ್ಲಿ ಸಹಸ್ರಾರು ಮಂದಿ ಭಕ್ತರು ಭಾಗಿಯಾದರು. ನೆತ್ತಿ ಸುಡುತ್ತಿದ್ದ ಬಿರು ಬಿಸಿಲಿನ ನಡುವೆಯೂ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ಗೋಪಾಲಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ವಿವಿಧ ರೀತಿಯ ಧಾರ್ಮಿಕ ಕೈಂಕರ್ಯಗಳನ್ನು ಪರಂಪರೆಗೆ ಅನುಗುಣವಾಗಿ ಅರ್ಚಕ ವೃಂದ ನೆರವೇರಿಸಿ ಇಡೀ ವಿಶ್ವಕ್ಕೆ ಒಳಿತಾಗುವಂತೆ ಪ್ರಾರ್ಥಿಸಿದೆ.
ರಥವನ್ನು ವಿವಿಧ ಬಣ್ಣಗಳ ಬಾವುಟಗಳು ಹಾಗು ಹೂವುಗಳು, ತಳಿರು ತೋರಣಗಳನ್ನು ಕಟ್ಟಿ ಅಲಂಕರಿಸಲಾಗಿತ್ತು. ಮಧ್ಯಾಹ್ನ 12.30ರ ಶುಭ ಘಳಿಗೆಯಲ್ಲಿ ಗೋಪಾಲಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.