ದೆಹಲಿ ಏಪ್ರಿಲ್ 13: ಬೇಸಿಗೆ ಬಿಸಿಲಿಗೆ ಹೈರಾಣಾಗಿದ್ದ ರಾಷ್ಟ್ರ ರಾಜಧಾನಿ ದೆಹಲಿಗೆ ವರುಣ ಕೃಪೆ ತೋರಿದ್ದಾನೆ. ವಾರಾಂತ್ಯದಲ್ಲಿ ಜೋರು ಮಳೆಯಾಗಿದ್ದು ಜನ ವರ್ಷದ ಮೊದಲ ಮಳೆಯನ್ನು ಆನಂದಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿ ಇಂದು ಸಂಜೆ ಭಾರೀ ಮಳೆಗೆ ಸಾಕ್ಷಿಯಾಗಿದೆ. ದೆಹಲಿಯಲ್ಲಿ ಹವಾಮಾನ ಬದಲಾವಣೆಯಾಗುತ್ತಿದ್ದಂತೆ ಬೇಸಿಗೆ ಬಿಸಿಲಿನಿಂದ ಕೊಂಚ ರಿಲೀಫ್ ಸಿಕ್ಕಿದೆ. ಮುಂದಿನ ಕೆಲ ಗಂಟೆಗಳಲ್ಲಿ ದೆಹಲಿ ಸೇರಿದಂತೆ ಭಾರೀ ಮಳೆಯಾಗುವ ಸೂಚನೆ ಕೂಡ ಇದೆ. ಹೀಗಾಗಿ ದೆಹಲಿಯ 17 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ದೆಹಲಿಯ 17 ವಿಮಾನಗಳ ಮಾರ್ಗ ಬದಲಾವಣೆ
ಇಂದು ಸಂಜೆ ದೆಹಲಿಯಲ್ಲಿ ಗುಡುಗು, ಮಿಂಚು ಹಾಗೂ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗಿದೆ. ಅಲ್ಲದೆ ಮುಂದಿನ ಎರಡು ಗಂಟೆಗಳಲ್ಲಿ ದೆಹಲಿ ಎನ್ಸಿಆರ್, ನೊಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ್, ಇತ್ಯಾದಿಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ದೆಹಲಿಯಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ವಿಮಾನ ನಿಲ್ದಾಣದ ಬಳಿ ಕೆಟ್ಟ ಹವಾಮಾನ ಸೃಷ್ಟಿಯಾಗಿದೆ. ಹೀಗಾಗಿ ಶನಿವಾರ ಸಂಜೆ ದೆಹಲಿ ವಿಮಾನ ನಿಲ್ದಾಣದಲ್ಲಿ ಸುಮಾರು 17 ವಿಮಾನಗಳನ್ನು ತಿರುಗಿಸಲಾಗಿದ್ದು ಪ್ರಯಾಣಿಕರು ಪರದಾಡುವಂತಾಗಿದೆ. ಸಂಜೆ 5ರ ನಂತರ ಹೆಚ್ಚಿನ ವಿಮಾನಗಳ ಮಾರ್ಗಗಳನ್ನು ಬದಲಾಯಿಸಲಾಗಿದೆ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (IGIA)ದಿಂದ ಪ್ರತಿದಿನ ಸುಮಾರು 1,300 ವಿಮಾನಗಳು ಸಂಚಾರ ಮಾಡುತ್ತವೆ. ಅವುಗಳಲ್ಲಿ ಕೆಲವನ್ನು ಇಂದು ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.